ADVERTISEMENT

ಫುಡ್‌ ಡೆಲಿವರಿ ನೌಕರನ ಬಂಧನ: ₹9 ಲಕ್ಷ ಮೌಲ್ಯದ ಗಾಂಜಾ ವಶ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2024, 15:46 IST
Last Updated 27 ಅಕ್ಟೋಬರ್ 2024, 15:46 IST
<div class="paragraphs"><p>ಬಂಧನ</p></div>

ಬಂಧನ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ‌ಹಣ ಗಳಿಸುವ ಉದ್ದೇಶದಿಂದ ಮಾದಕವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆಹಾರ ಪದಾರ್ಥಗಳ ಡೆಲಿವರಿ ನೌಕರರನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

ADVERTISEMENT

ಒಡಿಶಾದ ರೋಶನ್ ಕುಮಾರ್‌ ದಲೈ ಅವರನ್ನು ಬಂಧಿಸಿ, ₹9 ಲಕ್ಷ ಮೌಲ್ಯದ 4 ಕೆ.ಜಿ. 475 ಗ್ರಾಂ. ಗಾಂಜಾ, ಕೃತ್ಯಕ್ಕ್ಕೆ ಬಳಸುತ್ತಿದ್ದ ಮೊಬೈಲ್‌, ಎಲೆಕ್ಟ್ರಾನಿಕ್ ತೂಕದ ಯಂತ್ರ ಜಪ್ತಿ ಮಾಡಿದ್ದಾರೆ.

‘ಮೂರು ವರ್ಷಗಳಿಂದ ಮಹದೇವಪುರದ ಮಹೇಶ್ವರಿ ನಗರದಲ್ಲಿ ನೆಲೆಸಿದ್ದ ರೋಶನ್,  ಸ್ವಿಗ್ಗಿ ಮತ್ತು ಜೊಮ್ಯಾಟೊದಲ್ಲಿ ಆಹಾರ ಪದಾರ್ಥಗಳನ್ನು ಡೆಲಿವರಿ ಮಾಡುವ ಕೆಲಸ ಮಾಡುತ್ತಿದ್ದ. ಸುಲಭವಾಗಿ ಹಣ ಗಳಿಸಲು ಒಡಿಶಾ ರಾಜ್ಯದಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ನಗರಕ್ಕೆ ತಂದು ಪರಿಚಿತ ಗ್ರಾಹಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ 20 ಗ್ರಾಂ., 50 ಗ್ರಾಂ. ಪ್ಯಾಕೆಟ್ ಮಾಡಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಎಂಬುದು ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.