ಬೆಂಗಳೂರು: ನಗರದಲ್ಲಿ ಪಾದಚಾರಿ ಮಾರ್ಗಗಳನ್ನು ಖಾಸಗಿ ವ್ಯಕ್ತಿಗಳು ಮಾತ್ರವಲ್ಲದೇ ಪೊಲೀಸ್ ಮತ್ತು ಬಿಬಿಎಂಪಿಯಿಂದಲೇ ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿಲೆಟ್ಜ್‌ಕಿಟ್ ಫೌಂಡೇಷನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದೆ.
ಅರ್ಜಿಯಲ್ಲಿ ಉಲ್ಲೇಖಿಸಿರುವ ಸ್ಥಳಗಳನ್ನು ಪರಿಶೀಲಿಸಲು ಅಧಿಕಾರಿಗಳನ್ನು ನಿಯೋಜಿಸುವಂತೆ ಬಿಬಿಎಂಪಿಗೆ ನಿರ್ದೇಶನ ನೀಡಿದ ಪೀಠ, ಪ್ರತಿವಾದಿಗಳಿಗೆ ನೋಟಿಸ್ ನೀಡಲು ಆದೇಶಿಸಿತು.
‘ಕೇಂದ್ರ ವಾಣಿಜ್ಯ ಪ್ರದೇಶದ(ಸಿಬಿಡಿ) ಕೆಲ ರಸ್ತೆಗಳಲ್ಲಿ ಪಾದಚಾರಿ ಸ್ನೇಹಿಯಾದ ಮಾರ್ಗಗಳಿಲ್ಲ ಮತ್ತು ಅತಿಕ್ರಮಣವಾಗಿದೆ. ನಡಿಗೆದಾರರಿಗೆ ಅನುಕೂಲ ಆಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.
‘ಸುಸಜ್ಜಿತ ಪಾದಚಾರಿ ಮಾರ್ಗದ ಹಕ್ಕನ್ನು ಸಂವಿಧಾನದ ಆಡಿಯಲ್ಲಿ ಖಾತರಿಪಡಿಸಲಾಗಿದೆ. ಅರ್ಜಿಯಲ್ಲಿ ಸೂಚಿಸಿದ ಜಾಗಗಳನ್ನು ಪರಿಶೀಲಿಸಲು ಅಧಿಕಾರಿಯನ್ನು ನಿಯೋಜಿಸಲು ಬಿಬಿಎಂಪಿಗೆ ನಿರ್ದೇಶನ ನೀಡಲಾಗುತ್ತಿದೆ. ಅತಿಕ್ರಮಣ ಕಂಡುಬಂದರೆ ಕೂಡಲೇ ತೆರವುಗೊಳಿಸಬೇಕು’ ಎಂದು ಪೀಠ ತಿಳಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.