ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ನಗರದ ಮಣಿಪಾಲ್ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.
ವಯೋಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಕೃಷ್ಣ ಅವರನ್ನು ಚಿಕಿತ್ಸೆಗಾಗಿ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಏಪ್ರಿಲ್ 29ರಂದು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಡಾ. ಸತ್ಯನಾರಾಯಣ ಮೈಸೂರು ಮತ್ತು ಡಾ. ಸುನಿಲ್ ಕಾರಂತ್ ನೇತೃತ್ವದ ವೈದ್ಯರ ತಂಡವು ಕೃಷ್ಣ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಅಗತ್ಯವಿರುವ ವೈದ್ಯಕೀಯ ನೆರವನ್ನು ಒದಗಿಸಲಾಗುತ್ತಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.