ADVERTISEMENT

ಬೆಂಗಳೂರು | ₹1.57 ಕೋಟಿ ವಂಚನೆ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2024, 23:45 IST
Last Updated 4 ಅಕ್ಟೋಬರ್ 2024, 23:45 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ವೈದ್ಯಕೀಯ ಸೀಟು ಕೊಡಿಸುವುದಾಗಿ ನಂಬಿಸಿ ಉದ್ಯಮಿಯಿಂದ ₹1.57 ಕೋಟಿ ಪಡೆದು ವಂಚಿಸಿದ್ದ ಇಬ್ಬರು ಆರೋಪಿಗಳನ್ನು ನಗರದ ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ವಿರೂಪಾಕ್ಷಪ್ಪ ಹಾಗೂ ಮಂಜಪ್ಪ ಬಂಧಿತರು.

ಪಶ್ಚಿಮ ಬಂಗಾಳದ ಉದ್ಯಮಿಯೊಬ್ಬರಿಗೆ ವಂಚಿಸಿದ್ದ ಆರೋಪದ ಅಡಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

‘2022ರಲ್ಲಿ ತಮ್ಮ ಪುತ್ರಿಗೆ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಪಡೆಯಲು ಉದ್ಯಮಿ ಪ್ರಯತ್ನಿಸುತ್ತಿದ್ದರು. ಅದೇ ಸಂದರ್ಭದಲ್ಲಿ ಇಬ್ಬರು ಆರೋಪಿಗಳು ಪರಿಚಯ ಆಗಿದ್ದರು. ತಮಗೆ ಬೆಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜು ಆಡಳಿತ ಮಂಡಳಿಯವರು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಮುಖ ಅಧಿಕಾರಿಗಳ ಪರಿಚಯವಿದೆ ಎಂದು ಹೇಳಿಕೊಂಡಿದ್ದರು. ಹಣ ನೀಡಿದರೆ, ವೈದ್ಯಕೀಯ ಶಿಕ್ಷಣಕ್ಕೆ ಸೀಟು ಕೊಡಿಸುವುದಾಗಿ ಭರವಸೆ ನೀಡಿದ್ದರು. ಆರೋಪಿಗಳ ಮಾತು ನಂಬಿದ್ದ ಉದ್ಯಮಿ, ₹1.57 ಕೋಟಿ ಹಣ ನೀಡಿದ್ದರು. ನಂತರ, ಸೀಟು ಕೊಡಿಸದೇ ಮೋಸ ಮಾಡಿದ್ದರು. ಉದ್ಯಮಿ ನೀಡಿದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.