ಬೆಂಗಳೂರು: ಶ್ರವಣದೋಷ ನಿವಾರಣೆಗೆ ಸಂಬಂಧಿಸಿದಂತೆ ಉಚಿತ ಶಸ್ತ್ರಚಿಕಿತ್ಸೆಗೆ ಆರೋಗ್ಯ ಇಲಾಖೆಯು 20 ಆಸ್ಪತ್ರೆಗಳನ್ನು ಗುರುತಿಸಿದೆ.
ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ, ಬೌರಿಂಗ್ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ, ನಾರಾಯಣ ಹೃದಯಾಲಯ, ಎಂ.ಎಸ್. ರಾಮಯ್ಯ, ವೈದೇಹಿ, ಆಸ್ಟರ್ ಆರ್.ವಿ., ಅಪೋಲೊ (ಬನ್ನೇರುಘಟ್ಟ) ಆಸ್ಪತ್ರೆ ನೋಂದಣಿಯಾಗಿವೆ.
ಶಿವಮೊಗ್ಗದ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ, ತುಮಕೂರಿನ ಜಿಲ್ಲಾ ಆಸ್ಪತ್ರೆ, ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ರಾಯಚೂರಿನ ವೈದ್ಯಕೀಯ ವಿಜ್ಞಾನ ಸಂಸ್ಥೆ, ದಕ್ಷಿಣ ಕನ್ನಡದ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆ, ಕೆ.ಎಸ್. ಹೆಗ್ಡೆ ಆಸ್ಪತ್ರೆ, ಮಂಡ್ಯದ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬೆಳಗಾವಿಯ ಕೆ.ಎಲ್.ಇ.ಎಸ್. ಡಾ. ಪ್ರಭಾಕರ್ ಕೋರೆ ಆಸ್ಪತ್ರೆ, ಮೈಸೂರಿನ ಜೆ.ಎಸ್.ಎಸ್. ಆಸ್ಪತ್ರೆ ಹಾಗೂ ಚಿಕ್ಕಬಳ್ಳಾಪುರದ ಶ್ರೀ ಸತ್ಯ ಸಾಯಿ ಸರಳ ಮೆಮೋರಿಯಲ್ ಆಸ್ಪತ್ರೆಯಲ್ಲಿಉಚಿತ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.