ADVERTISEMENT

ಬೆಂಗಳೂರು: ಆ. 15ರಂದು ಉಚಿತ ನರರೋಗ ಚಿಕಿತ್ಸಾ ಶಿಬಿರ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2024, 15:51 IST
Last Updated 13 ಆಗಸ್ಟ್ 2024, 15:51 IST
<div class="paragraphs"><p>ಸಾಂಕೇತಿಕ ಚಿತ್ರ</p></div>

ಸಾಂಕೇತಿಕ ಚಿತ್ರ

   

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪಟ್ಟಣಗೆರೆ ರಂಗನಾಥಶಾಸ್ತ್ರಿ ಕೃಷ್ಣವೇಣಮ್ಮ ಮೆಮೋರಿಯಲ್ ಟ್ರಸ್ಟ್‌ನಿಂದ ಇದೇ 15ರಂದು ಬಸವನಗುಡಿಯ ತ್ಯಾಗರಾಜನಗರದಲ್ಲಿರುವ ಶ್ರೀಪಾದ ಶ್ರೀವಲ್ಲಭ ಭವನದಲ್ಲಿ ಉಚಿತ ನರರೋಗ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ.

ನಿವೃತ್ತ ಐಪಿಎಸ್‌ ಅಧಿಕಾರಿ ಗೋಪಾಲ್ ಹೊಸೂರ್‌ ಅವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ.

ADVERTISEMENT

ಸಂಸದ ಡಾ.ಸಿ.ಎನ್. ಮಂಜುನಾಥ್ ಅವರು ‘ಅಪಸ್ಮಾರವನ್ನು ಅರ್ಥ ಮಾಡಿಕೊಳ್ಳುವುದು’ ಪುಸ್ತಕವನ್ನು ಬಿಡುಗಡೆಗೊಳಿಸಲಿದ್ದಾರೆ. ನರರೋಗ ತಜ್ಞ ಡಾ.ಜಿ.ಟಿ. ಸುಭಾಷ್, ‘ವಿಜಯವಾಣಿ’ ದಿನಪತ್ರಿಕೆಯ ಸಂಪಾದಕ ಚನ್ನೇಗೌಡ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಕಾರ್ಯದರ್ಶಿ ಶ್ರೀಧರಮೂರ್ತಿ, ಗುರು ಸಂಕಣ್ಣಾಶ್ರಮ ಟ್ರಸ್ಟ್ ದತ್ತಾತ್ರೇಯ ದೇವಸ್ಥಾನದ ಕಾರ್ಯದರ್ಶಿ ಶ್ರೀಪಾದ್ ಎನ್.ಎಲ್., ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಶಿಬಿರವು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1ಗಂಟೆಯವರೆಗೆ ನಡೆಯಲಿದೆ. ನೋಂದಣಿಗೆ: 98450 38669.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.