ADVERTISEMENT

ಪಾದಚಾರಿ ಸ್ನೇಹಿ ಗಾಂಧಿ ಬಜಾರ್‌ಗೆ ಯೋಜನೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2021, 19:13 IST
Last Updated 12 ಫೆಬ್ರುವರಿ 2021, 19:13 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಗಾಂಧಿ ಬಜಾರ್‌ ಅನ್ನು ಪಾದಚಾರಿ ಸ್ನೇಹಿ ಮಾಡುವ ಸಂಬಂಧ ನಗರ ಭೂಸಾರಿಗೆ ನಿರ್ದೇಶನಾಲಯ (ಡಲ್ಟ್) ಯೋಜನೆ ಸಿದ್ದಪಡಿಸಿದೆ.

ಯೋಜನೆಯ ನೀಲನಕ್ಷೆಯನ್ನು ಪಾಲಿಕೆ ಕಚೇರಿಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು, ಶಾಸಕ ಉದಯ್ ಬಿ. ಗರುಡಾಚಾರ್, ಡಲ್ಟ್ ಆಯುಕ್ತರಾದ ವಿ.ಮಂಜುಳಾ, ಪಾಲಿಕೆ ಆಯುಕ್ತ ಎನ್‌. ಮಂಜುನಾಥ ಪ್ರಸಾದ್ ವೀಕ್ಷಿಸಿದರು.

ಟ್ಯಾಗೋರ್ ಪಾರ್ಕ್ ವೃತ್ತದಿಂದ ರಾಮಕೃಷ್ಣ ಆಶ್ರಮದ ತನಕ ಸುಮಾರು 700 ಮೀಟರ್ ಉದ್ದದ ರಸ್ತೆಯಲ್ಲಿ ಬೆಳಗ್ಗೆಯಿಂದ ರಾತ್ರಿ ತನಕ ವಾಹನ ಸಂಚಾರ ನಿಷೇಧಿಸಿ, ಎಲೆಕ್ಟ್ರಿಕ್ ವಾಹನ, ಸೈಕಲ್ ಹಾಗೂ ಪಾದಚಾರಿಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲು ಯೋಜನೆ ರೂಪಿಸಲಾಗಿದೆ. ಈ ಸಂಬಂಧ ಜನಾಭಿಪ್ರಾಯ ಸಂಗ್ರಹಿಸಿ ಯೋಜನೆಗೆ ಅಂತಿಮ ರೂಪರೇಷೆ ನೀಡುವಂತೆ ಡಲ್ಟ್ ಅಧಿಕಾರಿಗಳಿಗೆ ಎನ್.ಮಂಜುನಾಥ್ ಪ್ರಸಾದ್ ತಿಳಿಸಿದರು.

ADVERTISEMENT

‘ಗಾಂಧಿ ಬಜಾರ್ ರಸ್ತೆ ಎಂದರೆ ಹೂವು, ಹಣ್ಣು, ತರಕಾರಿ, ಪೂಜಾ ಸಾಮಗ್ರಿಗಳ ಮಾರಾಟದ ಪ್ರಮುಖ ತಾಣ. ಇಲ್ಲಿ ಬೀದಿ ಬದಿ ವ್ಯಾಪಾರಿಗಳು ಹೆಚ್ಚಿದ್ದು, ಪಾದಚಾರಿ ಮಾರ್ಗದಲ್ಲಿ ವ್ಯಾಪಾರ ಮಾಡುತ್ತಿರುವ ಕಾರಣ ದಟ್ಟಣೆಗೆ ಕಾರಣವಾಗಿದೆ. ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ ಪಾದಚಾರಿ ಸ್ನೇಹಿಯಾಗಿ ಮಾಡಬಹುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.