ADVERTISEMENT

ಬೆಂಗಳೂರು: ನಗರದ ವಿವಿಧೆಡೆ ಗಾಂಧಿ ಜಯಂತಿ ಆಚರಣೆ

ಸರ್ವಧರ್ಮ ಪ್ರಾರ್ಥನೆ, ಹಲವೆಡೆ ಸ್ವಚ್ಛತಾ ಕಾರ್ಯ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2024, 20:32 IST
Last Updated 2 ಅಕ್ಟೋಬರ್ 2024, 20:32 IST
<div class="paragraphs"><p>ಬಿಬಿಎಂಪಿ ಆಡಳಿತಾಧಿಕಾರಿ ಎಸ್.ಆರ್ ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು</p></div>

ಬಿಬಿಎಂಪಿ ಆಡಳಿತಾಧಿಕಾರಿ ಎಸ್.ಆರ್ ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು

   

ಬೆಂಗಳೂರು: ನಗರದ ವಿವಿಧೆಡೆ ಗಾಂಧಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕೆಲವು ಸಂಘಟನೆಗಳು, ಸಂಸ್ಥೆಗಳು ಸ್ವಚ್ಛತಾ ಅಭಿಯಾನವನ್ನು ನಡೆಸಿದವು.

ಬೆಂಗಳೂರು ನಗರ ವಿವಿ: ‘ವಿವಿಧ ರಾಷ್ಟ್ರಗಳ ನಡುವೆ ಭುಗಿಲೆದ್ದಿರುವ ಸಂಘರ್ಷಗಳು ಯುದ್ಧದ ಕಾರ್ಮೋಡಗಳನ್ನು ಸೃಷ್ಟಿಸಿ ವಿಶ್ವಶಾಂತಿಗೆ ಅಪಾರ ಆತಂಕ ತಂದೊಡ್ಡಿವೆ. ಇಂಥ ಸಂದರ್ಭದಲ್ಲಿ ವಿಶ್ವದ ಶಾಂತಿದೂತ ಮಹಾತ್ಮ ಗಾಂಧೀಜಿಯವರ ತತ್ವಗಳು ಪ್ರಸ್ತುತವಾಗಿವೆ’ ಎಂದು ಬೆಂಗಳೂರು ನಗರ ವಿಶ್ವವಿ ದ್ಯಾಲಯದ ಕುಲಪತಿ ಲಿಂಗರಾಜ ಗಾಂಧಿ ತಿಳಿಸಿದರು.

ADVERTISEMENT

ಕುಲಸಚಿವರಾದ ಟಿ. ಜವರೇಗೌಡ, ಸಿ.ಎಸ್. ಆನಂದ ಕುಮಾರ್, ಸಿಂಡಿಕೇಟ್ ಸದಸ್ಯರಾದ ಕೆ.ಪಿ. ಪಾಟೀಲ್, ಫ್ರಾನ್ಸಿಸ್, ಸಂಚಾಲಕ ಕೆ. ಶಿವಶಂಕರ್ ಉಪಸ್ಥಿತರಿದ್ದರು. ಸಮಾರಂಭಕ್ಕೆ ಮುನ್ನ ಸಾಮೂಹಿಕ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬಿಬಿಎಂಪಿ: ಬಿಬಿಎಂಪಿ ಆಡಳಿತಾಧಿಕಾರಿ ಎಸ್.ಆರ್ ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.

ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪ್ರತಿಭಾ ಬಾಲಮಂದಿರ ಮಕ್ಕಳಿಂದ ಗೀತ ವಾಚನ, ದೀಪಿಕಾ ಶ್ರೀಕಾಂತ್ ಅವರಿಂದ ವೈಷ್ಣವ ಜನತೋ, ಹಡ್ಸನ್ ಚರ್ಚಿನ ಧರ್ಮಗುರು ಆಲ್ಫ್ರೆಡ್ ಸುದರ್ಶನ್ ಮತ್ತು ತಂಡದಿಂದ ಬೈಬಲ್ ವಾಚನ, ಗುರುದ್ವಾರದ ಗುರುಸಿಂಗ್ ಸಭಾ ಮತ್ತು ತಂಡದವರಿಂದ ಗುರು ಗ್ರಂಥ ವಾಚನ, ಮೌಲ್ವಿ ಹಫೀಜ್ ಶಾಬೀರ್ ಹುಸೇನ್ ಅವರಿಂದ ಖುರಾನ್‌ ವಾಚನ ನಡೆಯಿತು.

ರೈಲ್ವೆ: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದಿಂದ ಮಹಾತ್ಮ ಗಾಂಧಿಯವರ 155ನೇ ಜನ್ಮ ದಿನಾಚರಣೆಯನ್ನು ಸ್ವಚ್ಛತೆ ಮತ್ತು ಸಾಮಾಜಿಕ ಜವಾಬ್ದಾರಿ ಉತ್ತೇಜಿಸುವ ಕಾರ್ಯಕ್ರಮಗಳ ಮೂಲಕ ಆಚರಿಸಲಾಯಿತು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ದಲ್ಲಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೇಶ್ ಮೋಹನ್ ರಾಷ್ಟ್ರಪಿತನಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಸ್ವಚ್ಛತಾ ಕಾರ್ಯಕ್ಕೆ  ಚಾಲನೆ ನೀಡಿದರು.

ಕಂಸಾಳೆ, ಶುಚಿತ್ವದ ಮಹತ್ವ ಸಾರುವ ಬೀದಿ ನಾಟಕ ಪ್ರದರ್ಶಿಸಲಾಯಿತು. ‘ಸ್ವಚ್ಛತಾ ಹಿ ಸೇವಾ’ ಅಭಿಯಾನದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕರಾದ ಅಶುತೋಷ್ ಮಾಥುರ್ ಮತ್ತು ಪರೀಕ್ಷಿತ್ ಮೋಹನ್‌ಪೂರಿಯ, ಹಿರಿಯ ವಿಭಾಗೀಯ ಪರಿಸರ, ಹೌಸ್‌ ಕೀಪಿಂಗ್‌ ವ್ಯವಸ್ಥಾಪಕಿ ಪ್ರಿಯಾ ಉಪಸ್ಥಿತರಿದ್ದರು.

ಏರ್ ಫೋರ್ಸ್ ಸ್ಟೇಷನ್‌ನಲ್ಲಿ ಸ್ವಚ್ಛತೆ
ಕೆಂಪಾಪುರದಲ್ಲಿರುವ ಏರ್‌ ಫೋರ್ಸ್‌ ಸ್ಟೇಷನ್‌ನ ಸಲಕರಣೆ ಡಿಪೊದಲ್ಲಿ ಸಮಗ್ರ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು. ಮಂಗಳವಾರ ಸರ್ಕಾರಿ ಪ್ರಾಥಮಿಕ ಶಾಲೆ ಯಲ್ಲಿ ಸಾರ್ವಜನಿಕ ಕಾರ್ಯಾಗಾರ, ಸ್ವಚ್ಛತೆ ಮತ್ತು ನೈರ್ಮಲ್ಯ ಅಭ್ಯಾಸಗಳ ಮಹತ್ವವನ್ನು ತಿಳಿಸಲಾಯಿತು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ನಡೆಸಲಾಯಿತು. ಬುಧವಾರ ಬೆಳ್ಳಂದೂರು ಕೆರೆಯ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಏರ್ ಕಮೋಡೋರ್ ಮನೋಜ್ ಕುಮಾರ್ ನೇತೃತ್ವದಲ್ಲಿ ಡಿಪೋ ಸಿಬ್ಬಂದಿ ಕೆರೆಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ಸ್ವಚ್ಛತಾ ಪ್ರತಿಜ್ಞೆ ಬೋಧಿಸಲಾಯಿತು.

ಗಾಂಧಿ ಜಯಂತಿ ಅಂಗವಾಗಿ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೇಶ್ ಮೋಹನ್ ಪಾಲ್ಗೊಂಡಿದ್ದರು


ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.