ADVERTISEMENT

ಬೆಂಗಳೂರು | ಗಾಂಜಾ ಮಾರಾಟಕ್ಕೆ ಸಿದ್ಧತೆ: ನಾಲ್ವರ ಬಂಧನ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2024, 15:16 IST
Last Updated 20 ನವೆಂಬರ್ 2024, 15:16 IST
<div class="paragraphs"><p>ಬಂಧನ (ಪ್ರಾತಿನಿಧಿಕ ಚಿತ್ರ)</p></div>

ಬಂಧನ (ಪ್ರಾತಿನಿಧಿಕ ಚಿತ್ರ)

   

ಬೆಂಗಳೂರು: ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆ ವೇಳೆ ಗಾಂಜಾ ಮಾರಾಟಕ್ಕೆ ಸಿದ್ದತೆ ನಡೆಸಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಮಡಿವಾಳ ಹಾಗೂ ಹಲಸೂರು ಗೇಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಒಡಿಶಾದಿಂದ ಗಾಂಜಾ ತರಿಸಿಕೊಂಡು ನಗರದಲ್ಲಿ ಮಾರಾಟಕ್ಕೆ ಮುಂದಾಗಿದ್ದ ಅಸ್ಸಾಂನ ಮೊಹಿಸಿನ್ ಬರಬುಯಾ(25), ಒಡಿಶಾದ ಅಭಯ್ ಕುಮಾರ್ (26), ಚಿರೋನ್ ನಾಯಕ್(26) ಅವರನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಆರೋಪಿಗಳಿಂದ ₹4.20 ಲಕ್ಷ ಮೌಲ್ಯದ 7 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಮಡಿವಾಳ ಸಮೀಪದ ಪಬ್‌ವೊಂದರಲ್ಲಿ ಆರೋಪಿಗಳಾದ ಮೊಹಿಸಿನ್ ಮತ್ತು ಅಭಯ್ ಕೆಲಸ ಮಾಡುತ್ತಿದ್ದರು. ಕ್ರಿಸ್‌ಮಸ್, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಗಾಂಜಾಕ್ಕೆ ಬಾರಿ ಬೇಡಿಕೆ ಇರುತ್ತದೆ. ಪಬ್‌ಗಳಲ್ಲಿ ಗಾಂಜಾ ಮಾರಾಟ ನಡೆಸಬಹುದು ಎಂದು ಅವರಿಬ್ಬರು ಯೋಜಿಸಿದ್ದರು. ಗಾಂಜಾ ತಂದುಕೊಡುವಂತೆ ಮತ್ತೊಬ್ಬ ಆರೋಪಿ ಚಿರೋನ್‌ಗೆ ಸೂಚಿಸಿದ್ದರು. ಆತ ಕೆಲವು ದಿನಗಳ ಹಿಂದಷ್ಟೇ ಗಾಂಜಾ ತಂದಿದ್ದ. ಖಚಿತ ಮಾಹಿತಿ ಆಧರಿಸಿ ಸಿಲ್ಕ್‌ ಬೋರ್ಡ್ ಜಂಕ್ಷನ್‌ನಲ್ಲಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.

ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಬನ್ನಪ್ಪ ರಸ್ತೆ ಬಳಿ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಸಿದ್ದತೆ ನಡೆಸಿದ್ದ ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೋರಮಂಗಲದ ಪ್ರವೀಣ್(30) ಬಂಧಿತ.

ಆರೋಪಿಯಿಂದ ₹4 ಲಕ್ಷ ಮೌಲ್ಯದ 12 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆರೋಪಿ ಮಹಾರಾಷ್ಟ್ರದಿಂದ ಗಾಂಜಾವನ್ನು ಕಡಿಮೆ ಬೆಲೆಗೆ ತರಿಸಿ, ನಗರದಲ್ಲಿ ಮಾರಾಟಕ್ಕೆ ಮುಂದಾಗಿದ್ದ ಎಂದು ಪೊಲೀಸರು ಹೇಳಿದರು.

ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.