ADVERTISEMENT

ಬೆಂಗಳೂರು|ಕುದುರೆಗೆ ‘ಗ್ಲಾಂಡರ್ಸ್’ ದೃಢ: ಡಿಜೆ ಹಳ್ಳಿ ‘ರೋಗಪೀಡಿತ ವಲಯ’ ಘೋಷಣೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2024, 16:26 IST
Last Updated 16 ಏಪ್ರಿಲ್ 2024, 16:26 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಉತ್ತರ ತಾಲ್ಲೂಕಿನ ಡಿ.ಜೆ.ಹಳ್ಳಿಯ ಕುದುರೆಯೊಂದರಲ್ಲಿ ‘ಗ್ಲಾಂಡರ್ಸ್’ ರೋಗ ದೃಢಪಟ್ಟಿದೆ.

ಖಲೀದ್ ಷರೀಫ್‌ ಅವರು ಸಾಕಿದ ಕುದುರೆಯಲ್ಲಿ ಈ ರೋಗ ಪತ್ತೆಯಾದ ಹಿನ್ನೆಲೆಯಲ್ಲಿ ನಂಬರ್ 72, ಮೋದಿ ರಸ್ತೆ, ಡಿ.ಜೆ.ಹಳ್ಳಿ ಕೇಂದ್ರ ಸ್ಥಾನದಿಂದ ಸುತ್ತಲಿನ 5 ಕಿ.ಮೀ ವ್ಯಾಪ್ತಿ ಪ್ರದೇಶವನ್ನು ‘ರೋಗಪೀಡಿತ ವಲಯ’ ಹಾಗೂ 5 ರಿಂದ 25 ಕಿ.ಮೀ ಪ್ರದೇಶವನ್ನು ‘ಜಾಗೃತ ವಲಯ’ ಎಂದು ಪಶುಸಂಗೋಪನೆ ಹಾಗೂ ಹೈನುಗಾರಿಕೆ ಇಲಾಖೆ ಘೋಷಿಸಿದೆ.

ADVERTISEMENT

ಈ ಪ್ರದೇಶದ ಒಳಗೆ ಮತ್ತು ಹೊರಗೆ ಕುದುರೆ, ಕತ್ತೆ ಮತ್ತು ಹೇಸರಗತ್ತೆಗಳ ಚಲನವಲನ ನಿರ್ಬಂಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.