ಬೆಂಗಳೂರು: ಮಹಾಲಕ್ಷ್ಮಿಲೇಔಟ್ನ ನಾಗಪುರ ರಸ್ತೆಯ ನಿವಾಸಿ, ಉದ್ಯಮಿ ಭ್ರಮರೇಶ್ ಅವರ ಮನೆಯಲ್ಲಿ ₹4 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಲಾಗಿದೆ.
ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರ ಸಹೋದರ ಭ್ರಮರೇಶ್ ಅವರು ಕುಟುಂಬದ ಸದಸ್ಯರ ಜೊತೆಗೆ ಯುರೋಪ್ ಪ್ರವಾಸಕ್ಕೆ ತೆರಳಿದ್ದರು. ಆ ಸಂದರ್ಭದಲ್ಲಿ ಕಳ್ಳರು ಕೃತ್ಯ ಎಸಗಿದ್ಧಾರೆ. ಭಾನುವಾರ ಮನೆಗೆ ವಾಪಸ್ ಬಂದು ನೋಡಿದಾಗ ಕಳವು ನಡೆದಿರುವುದು ಗೊತ್ತಾಗಿದೆ.
ಮನೆಯ ಕಾವಲುಗಾರ ನಾಪತ್ತೆಯಾಗಿದ್ದು, ಆತ ಕೆಲವರೊಂದಿಗೆ ಸೇರಿಕೊಂಡು ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದೆ. ಮಹಾಲಕ್ಷ್ಮಿ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
‘ಆರೋಪಿಗಳ ಪತ್ತೆಗೆ ನಾಲ್ಕು ತಂಡಗಳು ವಿವಿಧ ರಾಜ್ಯಗಳಿಗೆ ತೆರಳಿವೆ. ನೇಪಾಳದ ವ್ಯಕ್ತಿಯನ್ನು ಕಾವಲುಗಾರ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಸುಳಿವು ಸಿಕ್ಕಿದೆ. ಸದ್ಯದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು’ ಎಂದು ಪೊಲೀಸರು ಹೇಳಿದರು.
‘ಮನೆಯ ಚಾವಣಿಯ ಬಾಗಿಲು ಒಡೆದು ಒಳಗೆ ನುಗ್ಗಿದ ಕಳ್ಳರು 5 ಕೆ.ಜಿ ಚಿನ್ನ, ಕೆಲವು ವಜ್ರದ ಆಭರಣ ಹಾಗೂ ₹6 ಲಕ್ಷ ನಗದು ಕಳವು ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.