ADVERTISEMENT

ಚಿನ್ನಾಭರಣ ಕಳವು ಪ್ರಕರಣ: ಬಂಧಿತ ಆರೋಪಿ ವಿರುದ್ಧ 22 ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2024, 23:30 IST
Last Updated 5 ಅಕ್ಟೋಬರ್ 2024, 23:30 IST
ರಘು 
ರಘು    

ಬೆಂಗಳೂರು: ರಾತ್ರಿ ವೇಳೆ ಮನೆಯ ಬೀಗ ಒಡೆದು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಘುವನಹಳ್ಳಿ ಬಾಲಾಜಿ ಲೇಔಟ್‌ನ ನಿವಾಸಿ ರಘು ಅಲಿಯಾಸ್‌ ಪೆಪ್ಸಿ ಬಂಧಿತ.

‘ಆರೋಪಿಯಿಂದ ₹8.50 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಒಂದು ಬೈಕ್‌ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

ADVERTISEMENT

‘ಎಸ್‌ಎಂವಿ ಲೇಔಟ್‌ನ ಖಾಲಿದ್‌ ನಯಾಜ್‌ ಅವರ ಮನೆಯಲ್ಲಿ ಆರೋಪಿ, 220 ಗ್ರಾಂ ಚಿನ್ನಾಭರಣ, ₹50 ಸಾವಿರ ನಗದು ಹಾಗೂ ಬೈಕ್‌ ಕಳವು ಮಾಡಿದ್ದ. ನಯಾಜ್ ಅವರು ನೀಡಿದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು’ ಎಂದು ಪೊಲೀಸರು ಹೇಳಿದರು.

‘ಆರೋಪಿಯ ಬಂಧನದಿಂದ ಜ್ಞಾನಭಾರತಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು, ತಮಿಳುನಾಡಿನ ಕೊಯಮತ್ತೂರು ಹಾಗೂ ಆಂಧ್ರಪ್ರದೇಶದ ಚಿತ್ತೂರು ಠಾಣೆಗಳಲ್ಲಿ ದಾಖಲಾಗಿದ್ದ ತಲಾ ಎರಡು ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ಆರೋಪಿ ವಿರುದ್ಧ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ 22 ಪ್ರಕರಣಗಳು ದಾಖಲಾಗಿವೆ’ ಎಂದು ಪೊಲೀಸರು ತಿಳಿಸಿದರು.

‘ಸ್ನೇಹಿತರಾದ ಮಿಥುನ್‌, ದೀಪಕ್‌ ಹಾಗೂ ಜೈದೀಪು ಜತೆಗೆ ಸೇರಿಕೊಂಡು ಕಳ್ಳತನ ಮಾಡುತ್ತಿದ್ದೆ ಎಂಬುದಾಗಿ ಆರೋಪಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ’ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.