ADVERTISEMENT

ಮಹಿಳಾ ಮೀಸಲಾತಿ ಜಾರಿಗೆ ಮೋದಿ ಪ್ರಯತ್ನಿಸಲಿ: ಎಚ್.ಡಿ. ದೇವೇಗೌಡ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2020, 21:32 IST
Last Updated 8 ಮಾರ್ಚ್ 2020, 21:32 IST
ಎಚ್‌.ಡಿ.ದೇವೇಗೌಡ
ಎಚ್‌.ಡಿ.ದೇವೇಗೌಡ   

ಬೆಂಗಳೂರು: ‘ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಪ್ರಧಾನಿ ನರೇಂದ್ರ ಮೋದಿ ಪ್ರಯತ್ನ ಮಾಡಬೇಕು’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ತಿಳಿಸಿದರು.

ಮಹಿಳಾ ದಿನಾಚರಣೆ ಅಂಗವಾಗಿ ಜೆಡಿಎಸ್ ಬೆಂಗಳೂರು ಮಹಾನಗರ ಮಹಿಳಾ ಘಟಕವು ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘1996ರಲ್ಲಿ ನಾನು ಪ್ರಧಾನಿಯಾದ ಸಂದರ್ಭದಲ್ಲಿ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿಗಾಗಿ ಮಸೂದೆ ಮಂಡಿಸಿದ್ದೆ’ ಎಂದರು.

ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಲೀಲಾದೇವಿ ಆರ್. ಪ್ರಸಾದ್, ‘ಜಗತ್ತು ಸಾಕಷ್ಟು ಮುಂದುವರಿದಿದ್ದರೂ ಹೆಣ್ಣುಭ್ರೂಣ ಹತ್ಯೆಗಳ ಸಂಖ್ಯೆ ಕಡಿಮೆ ಆಗಿಲ್ಲ. ಅಲ್ಲದೆ, ಹೆಣ್ಣು ಹುಟ್ಟಿದ ಮೇಲೂ ಹಲವು ರೀತಿಯ ದೌರ್ಜನ್ಯಗಳು ನಡೆಯುತ್ತಿವೆ. ಇವುಗಳಿಗೆ ಕಡಿವಾಣ ಹಾಕಿದಾಗ ಮಾತ್ರ ಮಹಿಳಾ ದಿನಾಚರಣೆಗೆ ಅರ್ಥ ಬರುತ್ತದೆ’ ಎಂದರು.

ADVERTISEMENT

ಬೆಂಗಳೂರು ಮಹಾನಗರ ಮಹಿಳಾ ಘಟಕದ ಅಧ್ಯಕ್ಷೆ ರುತ್ ಮನೋರಮಾ ಇದ್ದರು. ಎಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ಅವರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.