ರಾಜರಾಜೇಶ್ವರಿನಗರ: ‘ಕಾಟಾಚಾರಕ್ಕೆ ಗ್ರಾಮಸಭೆ ನಡೆಸಿ ಕೈತೊಳೆದುಕೊಳ್ಳುವ ಪ್ರವೃತ್ತಿ ಏಕೆ. ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ 28 ಇಲಾಖೆಗಳು ಬರುತ್ತಿದ್ದು, ಈ ಪೈಕಿ 11 ಇಲಾಖೆಯ ಸಹಾಯಕರು ಮಾತ್ರ ಸಭೆಗೆ ಹಾಜರಾಗಿ ಹಾರಿಕೆಯ ಉತ್ತರ ನೀಡಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
ರಾಮಸಂದ್ರದಲ್ಲಿ ನಡೆದ ಸೂಲಿಕೆರೆ ಗ್ರಾಮ ಪಂಚಾಯಿತಿಯ ಮೊದಲನೇ ಸುತ್ತಿನ ಗ್ರಾಮ ಸಭೆಯಲ್ಲಿ ಮಾತನಾಡಿದರು. ಸಭೆಯಲ್ಲಿ ಸಾರ್ವ ಜನಿಕರು ಬೆರಳೆಣಿಕೆಯ ಸಂಖ್ಯೆಯಲ್ಲಿದ್ದರು. ಶಾಲಾ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರು. ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದಿದ್ದು ಏಕೆ ಎಂದು ಸದಸ್ಯರು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.