ADVERTISEMENT

ಗ್ಯಾರಂಟಿ ಅನುಷ್ಠಾನ ಸಮಿತಿ: ಆಹ್ವಾನದ ಪತ್ರಿಕೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2024, 16:34 IST
Last Updated 21 ನವೆಂಬರ್ 2024, 16:34 IST
<div class="paragraphs"><p>ಕಾಂಗ್ರೆಸ್ ಬಿಜೆಪಿ ಜೆಡಿಎಸ್‌</p></div>

ಕಾಂಗ್ರೆಸ್ ಬಿಜೆಪಿ ಜೆಡಿಎಸ್‌

   

ಬೆಂಗಳೂರು: ‘ರಾಜಾಜಿನಗರ ವಿಧಾನಸಭೆ ಕ್ಷೇತ್ರದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಪ್ರಕಟಣೆಯಲ್ಲಿ ಶಿಷ್ಟಾಚಾರವನ್ನು ಉಲ್ಲಂಘಿಸಲಾಗಿದೆ’ ಎಂದು ಬಿಜೆಪಿಯ ರಾಜಾಜಿನಗರ ಮಂಡಲ ಸಮಿತಿ ಆರೋಪಿಸಿದೆ.

‘ಸರ್ಕಾರದ ಹೆಸರಿನಲ್ಲಿ ನಡೆಯುತ್ತಿರುವ ಕಾರ್ಯಕ್ರಮ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರಿಗಾಗಿ ನಡೆಯುತ್ತಿರುವ ರಾಜಕೀಯ ಕಾರ್ಯಕ್ರಮವಾಗಿದೆ’ ಎಂದು ಮಂಡಲ ಸಮಿತಿ ಅಧ್ಯಕ್ಷ ಎ. ಸುದರ್ಶನ್‌, ಪ್ರಧಾನ ಕಾರ್ಯದರ್ಶಿಗಳಾದ ಜಿ. ಗಿರೀಶ್‌, ಬಿ.ಎಸ್‌. ಪ್ರವೀಣ್‌ಕುಮಾರ್‌ ದೂರಿದ್ದಾರೆ.

ADVERTISEMENT

‘ರಾಜಾಜಿನಗರ ವಿಧಾನಸಭೆ ಕ್ಷೇತ್ರದಲ್ಲಿ ರಚಿಸಿರುವ ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿಯನ್ನು ಪ್ರಕಾಶನಗರದಲ್ಲಿ ಉದ್ಘಾಟಿಸಲಾಗುತ್ತಿದೆ. ಗ್ಯಾರಂಟಿ ಎಲ್ಲರಿಗೂ ತಲುಪಿಸಬೇಕಾಗಿರುವುದು ಸರ್ಕಾರದ ಕರ್ತವ್ಯ. ಆದರೆ, ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಸ್ಥಳೀಯ ಶಾಸಕರನ್ನು ಆಹ್ವಾನಿಸದೆ, ವಿಧಾನ ಪರಿಷತ್‌ ಸದಸ್ಯರಿಂದ ಉದ್ಘಾಟಿಸುತ್ತಿರುವುದು ಸರಿಯಲ್ಲ.  ಅಲ್ಲದೆ, ಆಹ್ವಾನ ಪತ್ರಿಕೆಯನ್ನು ಇಂಗ್ಲಿಷ್‌ನಲ್ಲಿ ಮುದ್ರಿಸಲಾಗಿದೆ’ ಎಂದು ಆರೋಪಿಸಿದ್ದಾರೆ.

ಈ ವಿಚಾರದ ಬಗ್ಗೆ ರಾಜಾಜಿನಗರದಲ್ಲಿ ಆಕ್ರೋಶ ವ್ಯಕ್ತವಾದ್ದರಿಂದ, ಆಹ್ವಾನ ಪತ್ರಿಕೆಯನ್ನು ಹೊಸದಾಗಿ ಮುದ್ರಿಸಲಾಗಿದೆ. ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಅವರ ಜೊತೆ ಸ್ಥಳೀಯ ಶಾಸಕ ಸುರೇಶ್‌ಕುಮಾರ್ ಅವರ ಹೆಸರನ್ನೂ ಸೇರಿಸಿ, ಕಾಂಗ್ರೆಸ್‌ನ ಹಲವು ಮಖಂಡರ ಹೆಸರನ್ನು ಕೈಬಿಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.