ಬೆಂಗಳೂರು: ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯಕ್ಕೆ ಬಳಸಿಕೊಳ್ಳಬೇಕು ಎಂದು ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆ ಒತ್ತಾಯಿಸಿದೆ.
ರಾಜ್ಯದ ವಿವಿಧ ಪದವಿಪೂರ್ವ ಕಾಲೇಜುಗಳಲ್ಲಿ ಮೂರು ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಸಮರ್ಥವಾಗಿ ಪಾಠ ಮಾಡುತ್ತಿದ್ದಾರೆ. ಪ್ರತಿ ತಿಂಗಳು ಕೇವಲ ₹ 12 ಸಾವಿರಕ್ಕೆ ದುಡಿಯುತ್ತಿದ್ದಾರೆ. ಆದರೆ, ಮೌಲ್ಯಮಾಪನ ಕಾರ್ಯಕ್ಕೆ ಬಳಸಿಕೊಳ್ಳುತ್ತಿಲ್ಲ. ಖಾಸಗಿ ಪದವಿಪೂರ್ವ ಕಾಲೇಜು ಉಪನ್ಯಾಸಕರಿಗೆ ಅವಕಾಶ ನೀಡಿದ್ದರೂ, ಅತಿಥಿ ಉಪನ್ಯಾಸಕರನ್ನು ಕಡೆಗಣಿಸಲಾ ಗಿದೆ. ಅತಿಥಿ ಉಪನ್ಯಾಸಕರನ್ನೂ ಮೌಲ್ಯ ಮಾಪನ ಪ್ರಕ್ರಿಯೆಯಲ್ಲಿ ಬಳಸಿಕೊಳ್ಳಲು ಅವಕಾಶ ಕಲ್ಪಿಸಿ ತಕ್ಷಣ ಇಲಾಖೆಯ ಮುಖ್ಯಸ್ಥರು ಆದೇಶ ಹೊರಡಿಸಬೇಕು ಎಂದು ಸಂಘದ ರಾಜ್ಯ ಕಾರ್ಯದರ್ಶಿ ರಾಜೇಶ್ ಭಟ್ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.