ADVERTISEMENT

ಬೃಂದಾವನಕ್ಕೆ ‘ಲಕ್ಷ ಪುಷ್ಪಾರ್ಚನೆ’

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2021, 18:14 IST
Last Updated 20 ಮಾರ್ಚ್ 2021, 18:14 IST
ಪೇಜಾವರ ಮಠದ ವಿಶ್ವಪ್ರಸನ್ನತೀರ್ಥರು ಲಕ್ಷ ಪುಷ್ಪಾರ್ಚನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು
ಪೇಜಾವರ ಮಠದ ವಿಶ್ವಪ್ರಸನ್ನತೀರ್ಥರು ಲಕ್ಷ ಪುಷ್ಪಾರ್ಚನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು   

ಬೆಂಗಳೂರು: ಶ್ರೀ ರಾಘವೇಂದ್ರ ಸ್ವಾಮಿಯ 426ನೇ ವರ್ಧಂತ್ಯುತ್ಸವದ ಅಂಗವಾಗಿ ಜಯನಗರದ 5ನೇ ಬಡಾವಣೆಯಲ್ಲಿರುವ ಮಠದಲ್ಲಿ ಸ್ವಾಮಿಯ ಬೃಂದಾವನಕ್ಕೆ ಅಷ್ಟೋತ್ತರ ಪಾರಾಯಣದಿಂದ ಫಲ ಪಂಚಾಮೃತಾಭಿಷೇಕ ನೆರವೇರಿಸಲಾಯಿತು.

ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರ ಆದೇಶದಂತೆ ಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ.ವಾದೀಂದ್ರ ಆಚಾರ್ಯ ಹಾಗೂ ಜಿ.ಕೆ ಆಚಾರ್ಯರ ನೇತೃತ್ವದಲ್ಲಿ ಪವಮಾನ ಹೋಮದ ಪೂರ್ಣಾಹುತಿ, ಉತ್ಸವಗಳು, ಪಾದಪೂಜೆ, ಕನಕಾಭಿಷೇಕ ಕಾರ್ಯಕ್ರಮ ಶನಿವಾರ ನಡೆದವು.

ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥರು ಸಂಸ್ಥಾನ ಪೂಜೆ ನೆರವೇರಿಸಿದರು. ಬಳಿಕ ಸ್ವಾಮಿಯ ಬೃಂದಾವನಕ್ಕೆ ವಿಶೇಷವಾಗಿ ವಿಷ್ಣು ಸಹಸ್ರನಾಮ, ವೆಂಕಟೇಶ ಸ್ತೋತ್ರ, ಶ್ರೀಹರಿ-ವಾಯುಸ್ತುತಿ, ಶ್ರೀ ರಾಘವೇಂದ್ರ ಅಷ್ಟೋತ್ತರ ಸ್ತೋತ್ರ ಪಾರಾಯಣದಿಂದ ವಿವಿಧ ಬಗೆಯ ಪುಷ್ಪಗಳಿಂದ ‘ಲಕ್ಷ ಪುಷ್ಪಾರ್ಚನೆ’ ನೆರವೇರಿಸಿದರು.

ADVERTISEMENT

ಸಂಜೆ ವಿದ್ವಾನ್ ವಿ. ವಿವೇಕ್ ಕೃಷ್ಣ ‘ಕೊಳಲು ವಾದನ’ ಕಾರ್ಯಕ್ರಮ ನಡೆಸಿಕೊಟ್ಟರು. ನಟಿ ಪ್ರೇಮಾ, ನಟ ದೀಪಕ್ ಅವರು ರಾಯರ ದರ್ಶನ ಪಡೆದರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.