ADVERTISEMENT

ಮಹಾರಾಷ್ಟ್ರ, ಹರಿಯಾಣ ಚುನಾವಣಾ ಫಲಿತಾಂಶ ಬಿಜೆಪಿಗೆ ಎಚ್ಚರಿಕೆ ಗಂಟೆ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2019, 9:33 IST
Last Updated 24 ಅಕ್ಟೋಬರ್ 2019, 9:33 IST
   

ಬೆಂಗಳೂರು:ವಿರೋಧ ಪಕ್ಷಗಳನ್ನು ನಾಶ ಮಾಡಲು, ಜನರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ ಎಂಬುದಕ್ಕೆ ಮಹಾರಾಷ್ಟ್ರ, ಹರಿಯಾಣ ಚುನಾವಣಾ ಫಲಿತಾಂಶ ತೋರಿಸಿಕೊಟ್ಟಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಪಕ್ಷದ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಿಯಾಣ ಮತ್ತು ಮಹಾರಾಷ್ಟ್ರದ ಚುನಾವಣೆ ಫಲಿತಾಂಶ ರಾಜ್ಯದ ಬಿಜೆಪಿಗೆ ಎಚ್ಚರಿಕೆಯ ಗಂಟೆ ಎಂದು ಕುಮಾರಸ್ವಾಮಿ ಹೇಳಿದರು.

ಡಿಸೆಂಬರ್ 5ರಂದು ರಾಜ್ಯದಲ್ಲಿ ಉಪಚುನಾವಣೆ ನಡೆಯುವುದೇ ಸಂಶಯ ಇದೆ, ಯಾಕೆಂದರೆ ಚುನಾವಣಾ ಆಯೋಗವೇ ಕೇಂದ್ರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದೆ. ಉಪಚುನಾವಣೆ ನಡೆಯುತ್ತದೆಯೋ ಅಥವಾ ಮಹಾಚುನಾವಣೆ ನಡೆಯುತ್ತದೆಯೋ ಎಂಬುದನ್ನು ಕಾದು ನೋಡಬೇಕಿದೆ. ಚುನಾವಣೆ ಬಗ್ಗೆ ಯಾರು ಕೂಡ ಧೈರ್ಯವಾಗಿ ಮಾತನಾಡುತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ADVERTISEMENT

ನಾವುಉಪಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಮತ್ತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.

2013ರಲ್ಲಿ ಯಡಿಯೂರಪ್ಪ ಅವರು ಪ್ರತ್ಯೇಕ ಪಕ್ಷ ಕಟ್ಟಿದ್ದರಿಂದಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂತು ಕುಮಾರಸ್ವಾಮಿ ಹೇಳಿದರು.

ಡಿ.ಕೆ.ಶಿವಕುಮಾರ್‌ ಅವರಿಗೆ ಮೊದಲೇ ಜಾಮೀನು ಸಿಗಬೇಕಿತ್ತು. ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ಕೊಟ್ಟ ನಂತರವೂ ಅವರನ್ನು ಅನಗತ್ಯವಾಗಿ ಜೈಲಿನಲ್ಲಿ ಇಡಲಾಯಿತು. ಇದು ಕೇಂದ್ರ ಸರ್ಕಾರ ಸರ್ಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ಸಾಕ್ಷಿ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.