ADVERTISEMENT

ಎಚ್‌1ಎನ್1: ಉಡುಪಿಯಲ್ಲಿ 4 ಸೇರಿ 35 ಪ್ರಕರಣ ದೃಢ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2023, 20:26 IST
Last Updated 29 ಆಗಸ್ಟ್ 2023, 20:26 IST
   

ಬೆಂಗಳೂರು: ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈವರೆಗೆ 35 ಎಚ್‌1ಎನ್1 ಪ್ರಕರಣಗಳು ದೃಢಪಟ್ಟಿವೆ. 

ಜ್ವರದ ಶಂಕಿತರಲ್ಲಿ 2,658 ಮಂದಿಯ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. ಈವರೆಗೆ ಐದು ಜಿಲ್ಲೆಗಳಲ್ಲಿ ಎಚ್‌1ಎನ್‌1 ಪ್ರಕರಣಗಳು ಪತ್ತೆಯಾಗಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 22, ಬೆಂಗಳೂರು ನಗರ ಜಿಲ್ಲೆಯಲ್ಲಿ 7, ಉಡುಪಿಯಲ್ಲಿ 4, ಹಾಸನ ಹಾಗೂ ಮೈಸೂರಿನಲ್ಲಿ ತಲಾ ಒಂದು ಪ್ರಕರಣ ದೃಢಪಟ್ಟಿದೆ. ಈ ವರ್ಷ ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ. 

ಕಳೆದ ವರ್ಷ ರಾಜ್ಯದಲ್ಲಿ 3,339 ಶಂಕಿತರ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಲ್ಲಿ 517 ಮಂದಿಯಲ್ಲಿ ಈ ಜ್ವರ ದೃಢಪಟ್ಟಿತ್ತು. 14 ಮಂದಿ ಜ್ವರದ ತೀವ್ರತೆಗೆ ಮೃತಪಟ್ಟಿದ್ದರು. 2019ರಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಈ ಜ್ವರದಿಂದ ಬಳಲಿದ್ದು, 96 ಮಂದಿ ಮರಣ ಹೊಂದಿದ್ದರು.  

ADVERTISEMENT

‘ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಪ್ರಕರಣ ಕಡಿಮೆಯಿದೆ. ಅದಾಗಿಯೂ ಶೀಘ್ರ ರೋಗ ಪತ್ತೆ ಹಚ್ಚಿ, ಅಗತ್ಯ ಚಿಕಿತ್ಸೆ ಕೊಡಿಸಲು ಕ್ರಮ ವಹಿಸಲಾಗಿದೆ’ ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.