ಬೆಂಗಳೂರು: ಹವಾಲಾ ದಂಧೆಯಲ್ಲಿ ತೊಡಗಿದ್ದ ಆರೋಪದಡಿ ಪಂಕಜ್ ಪಟೇಲ್ (47) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಆತನಿಂದ ₹ 28 ಲಕ್ಷ ಜಪ್ತಿ ಮಾಡಿದ್ದಾರೆ.
'ಕಬ್ಬನ್ ಪೇಟೆ ಮುಖ್ಯ ರಸ್ತೆಯಲ್ಲಿರುವ ಮನೆಯಲ್ಲಿ ಆರೋಪಿ ಹಣ ಸಂಗ್ರಹ ಮಾಡಿದ್ದ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಮನೆ ಮೇಲೆ ದಾಳಿ ಮಾಡಲಾಯಿತು' ಎಂದು ಪೊಲೀಸರು ತಿಳಿಸಿದರು.
'ಅಕ್ರಮವಾಗಿ ಹಣ ಸಂಗ್ರಹಿಸಿದ್ದ ಆರೋಪಿ, ಆ ಹಣಕ್ಕೆ ಸರ್ಕಾರಕ್ಕೆ ತೆರಿಗೆ ಪಾವತಿ ಮಾಡಿರಲಿಲ್ಲ. ಹಲವರಿಂದ ಹಣ ಪಡೆದಿದ್ದ ಆರೋಪಿ, ಅದನ್ನು ಹವಾಲಾ ದಂಧೆ ಮೂಲಕ ಬದಲಾಯಿಸುತ್ತಿದ್ದ' ಎಂದೂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.