ADVERTISEMENT

ಮಧ್ಯಂತರ ಬಜೆಟ್ | ಮೋದಿ ದೂರದೃಷ್ಟಿ ಈ ಆಯವ್ಯಯದಲ್ಲಿ ಅಡಗಿದೆ: ಕುಮಾರಸ್ವಾಮಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಫೆಬ್ರುವರಿ 2024, 12:40 IST
Last Updated 1 ಫೆಬ್ರುವರಿ 2024, 12:40 IST
ಎಚ್‌.ಡಿ ಕುಮಾರಸ್ವಾಮಿ
ಎಚ್‌.ಡಿ ಕುಮಾರಸ್ವಾಮಿ    

(ಸಂಗ್ರಹ ಚಿತ್ರ)

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಮಧ್ಯಂತರ ಬಜೆಟ್ ಅನ್ನು ನಾನು ಸ್ವಾಗತಿಸುತ್ತೇನೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು, ‘‌ಕೃಷಿ ವಲಯ ಮತ್ತು ಕೃಷಿ ಧಾನ್ಯಗಳ ಬೆಳೆಗೆ ಉತ್ತೇಜನ, ಉದ್ಯೋಗ ಸೃಷ್ಟಿ, ಯುವ ಉದ್ಯಮಿಗಳಿಗೆ ಪ್ರೋತ್ಸಾಹ, ಉತ್ಪಾದನೆಗೆ ಒತ್ತು ಇತ್ಯಾದಿ ಕ್ರಮಗಳು ಸ್ವಾಗತಾರ್ಹ ಎಂದಿದ್ದಾರೆ.

ADVERTISEMENT

ಹಾಗೆಯೇ ದೇಶೀಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಕಲ್ಪ ಮಾಡಿ ಲಕ್ಷದ್ವೀಪ ಸೇರಿ ರಾಜ್ಯದ ಕರಾವಳಿ ಪ್ರವಾಸೋದ್ಯಮದ ಬೆಳವಣಿಗೆಗೆ ಮನ್ನಣೆ ನೀಡಲಾಗಿದೆ. ನನ್ನ ಅಭಿಪ್ರಾಯದ ಪ್ರಕಾರ ‘ಇದೊಂದು ಜನಪರ, ಅಭಿವೃದ್ಧಿಪರ ಹಾಗೂ ವಿಕಾಸಪೂರಕ ಬಜೆಟ್. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಈ ಆಯವ್ಯಯದಲ್ಲಿ ಅಡಗಿದೆ' ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.