ADVERTISEMENT

ಬೆಂಗಳೂರು: ಜಲಮಂಡಳಿ ಸಿಬ್ಬಂದಿಗೆ ಆರೋಗ್ಯ ತಪಾಸಣೆ

​ಪ್ರಜಾವಾಣಿ ವಾರ್ತೆ
Published 1 ಮೇ 2024, 14:28 IST
Last Updated 1 ಮೇ 2024, 14:28 IST
ಜಲಮಂಡಳಿ ವತಿಯಿಂದ ಆಯೋಜಿಸಿದ್ದ ಆರೋಗ್ಯ ಶಿಬಿರವನ್ನು ಅಧ್ಯಕ್ಷ ಡಾ. ರಾಮ್‌ಪ್ರಸಾತ್‌ ಮನೋಹರ್‌ ವೀಕ್ಷಿಸಿದರು
ಜಲಮಂಡಳಿ ವತಿಯಿಂದ ಆಯೋಜಿಸಿದ್ದ ಆರೋಗ್ಯ ಶಿಬಿರವನ್ನು ಅಧ್ಯಕ್ಷ ಡಾ. ರಾಮ್‌ಪ್ರಸಾತ್‌ ಮನೋಹರ್‌ ವೀಕ್ಷಿಸಿದರು   

ಬೆಂಗಳೂರು: ಜಲಮಂಡಳಿಯ ಕಾರ್ಮಿಕರು ಹಾಗೂ ಸಿಬ್ಬಂದಿಯ ಆರೋಗ್ಯವನ್ನು ಸುಸ್ಥಿಯಲ್ಲಿಡುವ ದೃಷ್ಟಿಯಿಂದ ಪ್ರತಿವರ್ಷ ಮೇ ತಿಂಗಳಲ್ಲಿ ಆರೋಗ್ಯ ಉಚಿತ ತಪಾಸಣೆ ನಡೆಸಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ಡಾ. ರಾಮ್‌ಪ್ರಸಾತ್‌ ಮನೋಹರ್‌ ತಿಳಿಸಿದರು.

ಎಚ್‌ಬಿಆರ್‌ ಬಡಾವಣೆಯಲ್ಲಿರುವ ಜಲಮಂಡಳಿ ಕಚೇರಿಯಲ್ಲಿ ಕಾರ್ಮಿಕ ದಿನಾಚರಣೆಯ ಅಂಗವಾಗಿ ಆಲ್ಟಿಯಸ್‌ ಮತ್ತು ಲಕ್ಷ್ಮಿ ಗ್ರೂಪ್‌ ಆಸ್ಪತ್ರೆ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಗರಕ್ಕೆ ನಿರಂತರವಾಗಿ ನೀರು ಸರಬರಾಜು ಮಾಡಲು ಹಾಗೂ ನಗರದ ಸ್ವಾಸ್ಥ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ಜಲಮಂಡಳಿಯ ವಾಟರ್‌ಮ್ಯಾನ್‌, ಸ್ಯಾನಿಟರಿ ವರ್ಕರ್‌, ಜೆಟ್ಟಿ ಡ್ರೈವರ್‌ ಸೇರಿದಂತೆ ಎಲ್ಲಾ ಸಿಬ್ಬಂದಿಗೂ ಮಂಡಳಿ ವತಿಯಿಂದ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಾಗುವುದು. ಇದಕ್ಕಾಗಿ ಹಲವು ಪ್ರಮುಖ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದರು.

ADVERTISEMENT

ಜಲಮಂಡಳಿಯ ಕಾರ್ಮಿಕರು ಹಾಗೂ ಸಿಬ್ಬಂದಿಯೂ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಹೊಂದಬೇಕು. ದುಶ್ಚಟಗಳಿಂದ ದೂರವಿದ್ದು, ಉತ್ತಮ ಆರೋಗ್ಯದ ಕಡೆಗೆ ಗಮನ ನೀಡಬೇಕು ಎಂದು ಕರೆ ನೀಡಿದರು.

ನಿರ್ವಹಣಾ ವಿಭಾಗದ ಮುಖ್ಯ ಎಂಜಿನಿಯರ್‌ ಕುಮಾರ್ ನಾಯ್ಕ್, ಎಸ್.ಇ. ದಲಾಯತ್, ಕಾರ್ಯನಿರ್ವಾಹಕ ಎಂಜಿನಿಯರ್ ಚನ್ನಬಸವರಾಜು ಉಪಸ್ಥಿತರಿದ್ದರು. 300ಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರು ಆರೋಗ್ಯ ಶಿಬಿರದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.