ADVERTISEMENT

ಹೈಕೋರ್ಟ್‌ನಲ್ಲಿ ಇತಿಹಾಸ ಸೃಷ್ಟಿಸಿದ ಶ್ರವಣದೋಷ ವಕೀಲೆ ಸಾರಾ ಸನ್ನಿ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2024, 15:40 IST
Last Updated 8 ಏಪ್ರಿಲ್ 2024, 15:40 IST
   

ಬೆಂಗಳೂರು: ದುಭಾಷಿಯ ನೆರವಿನಿಂದ ಸಂಕೇತ ಭಾಷೆ ಬಳಸಿ ವಾದ ಮಂಡಿಸುವ ಮೂಲಕ ನಗರದ ವಾಕ್ ಮತ್ತು ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ ಸೋಮವಾರ ಹೈಕೋರ್ಟ್‌ನಲ್ಲಿ ಇತಿಹಾಸ ಸೃಷ್ಟಿಸಿದರು.

ಸ್ಕಾಟ್ಲೆಂಡ್‌ನಲ್ಲಿರುವ ಪತಿ ಮತ್ತು ಬೆಂಗಳೂರಿನಲ್ಲಿರುವ ಪತ್ನಿಯ ನಡುವಿನ ಕೌಟುಂಬಿಕ ವ್ಯಾಜ್ಯವೊಂದರಲ್ಲಿ ಪತಿಗೆ ಲುಕ್ ಔಟ್ (ಎಲ್‌ಒಸಿ) ನೋಟಿಸ್ ಜಾರಿಗೊಳಿಸಿದ್ದು, ಇದನ್ನು ರದ್ದುಗೊಳಿಸಬೇಕು ಎಂದು ಕೋರಿ ಪತಿ ಸಲ್ಲಿಸಿರುವ ಅರ್ಜಿಯಲ್ಲಿ ಸಾರಾ ಸನ್ನಿ ಅರ್ಜಿದಾರರ ಪತ್ನಿಯ ಪರವಾಗಿ ಹಾಜರಾಗಿದ್ದರು.

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಸಾರಾ ಅವರು ಆಂಗಿಕ ಸಂಜ್ಞೆಗಳ ಮೂಲಕ ದುಭಾಷಿಯ ನೆರವಿನಲ್ಲಿ ವಿಷಯ ಮಂಡಿಸಿದರು. ಇದಕ್ಕೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮೆಚ್ಚುಗೆ ಸೂಚಿಸಿದರು. ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರ ಪತಿಯ ಪರ ವಕೀಲರಿಗೆ ಸೂಚಿಸಿ ವಿಚಾರಣೆ ಮುಂದೂಡಿದರು. ಕೇಂದ್ರ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಅರವಿಂದ ಕಾಮತ್‌ ಮತ್ತು ಡೆಪ್ಯುಟಿ ಸಾಲಿಸಿಟರ್‌ ಜನರಲ್ ಎಚ್.ಶಾಂತಿಭೂಷಣ್‌ ಹಾಜರಿದ್ದರು.

ADVERTISEMENT

ಸಾರಾ ಅವರು ದುಭಾಷಿಯ ನೆರವಿನಿಂದ ಸಂಕೇತ ಭಾಷೆ ಬಳಸಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿ ಇತಿಹಾಸ ಸೃಷ್ಟಿಸಿದ್ದರು. ಇದೀಗ ಇದೇ ಪ್ರಥಮ ಬಾರಿಗೆ ಹೈಕೋರ್ಟ್‌ನಲ್ಲೂ ಅವರು ವಾದ ಮಂಡಿಸುವ ಮೂಲಕ ಕರ್ನಾಟಕ ಹೈಕೋರ್ಟ್‌ನ ಮತ್ತೊಂದು ಹೊಸ ಮಜಲಿಗೆ ಕಾರಣೀಭೂತರಾದರು.

justice m.nagaprasanna
ಸಾರಾ ಸನ್ನಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.