ADVERTISEMENT

ರಾಜ್ಯದ ವಿವಿಧೆಡೆ ಮೂರು ದಿನ ಭಾರಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2024, 15:58 IST
Last Updated 22 ಜೂನ್ 2024, 15:58 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಕರಾವಳಿಯ ಎಲ್ಲ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮೂರು ದಿನ ಭಾರಿ ಮಳೆಯಾಗುವ ಜತೆಗೆ ಬಲವಾಗಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರ ಎಂಟು ಜಿಲ್ಲೆಗಳಿಗೆ ತೀವ್ರ ಮಳೆಯ ಅಲರ್ಟ್ ಘೋಷಿಸಿದೆ. 

ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಂಭವವಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಬೆಳಗಾವಿ ಹಾಗೂ ಬೀದರ್ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ADVERTISEMENT

ಈ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. 

ಕರಾವಳಿ ಉದ್ದಕ್ಕೂ ಗಂಟೆಗೆ 35 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಸಮುದ್ರದಲ್ಲಿ ಭಾರಿ ಅಲೆಗಳು ಕಾಣಿಸಿಕೊಳ್ಳಬಹುದು. ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರವಹಿಸಬೇಕು ಎಂದು ಇಲಾಖೆ ಹೇಳಿದೆ.

ಸೋಮವಾರದಂದೂ ಕರಾವಳಿಯ ಮೂರು ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್’ ಸೇರಿ 12 ಜಿಲ್ಲೆಗಳಲ್ಲಿ ತೀವ್ರ ಮಳೆಯ ಅಲರ್ಟ್ ಘೋಷಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.