ADVERTISEMENT

ದಕ್ಷಿಣ ಕನ್ನಡ, ಉಡುಪಿಗೆ ‘ಯೆಲ್ಲೊ ಅಲರ್ಟ್’

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2024, 13:49 IST
Last Updated 8 ಅಕ್ಟೋಬರ್ 2024, 13:49 IST
   

ಬೆಂಗಳೂರು: ಕರಾವಳಿ ಭಾಗದ ಕೆಲವೆಡೆ ಬುಧವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಇಲಾಖೆಯು ‘ಯೆಲ್ಲೊ ಅಲರ್ಟ್’ ನೀಡಿದೆ. ಈ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಂಭವವಿದ್ದು, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ADVERTISEMENT

ಇದೇ 13ರವರೆಗೂ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.