ADVERTISEMENT

ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆ ಮರೆಮಾಚಿ ಸವಾರಿ: ಎಫ್‌ಐಆರ್‌ ದಾಖಲು

​ಪ್ರಜಾವಾಣಿ ವಾರ್ತೆ
Published 25 ಜುಲೈ 2024, 16:24 IST
Last Updated 25 ಜುಲೈ 2024, 16:24 IST
ಎಫ್‌ಐಆರ್‌ (ಪ್ರಾತಿನಿಧಿಕ ಚಿತ್ರ)
ಎಫ್‌ಐಆರ್‌ (ಪ್ರಾತಿನಿಧಿಕ ಚಿತ್ರ)   

ಬೆಂಗಳೂರು: ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆಯನ್ನು ಮರೆಮಾಚಿ ವಾಹನ ಚಲಾಯಿಸುತ್ತಿದ್ದ ವ್ಯಕ್ತಿ ವಿರುದ್ಧ ವೈಟ್‌ಫೀಲ್ಡ್‌ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಿರೋಜ್‌ ಖಾನ್‌ (22) ಅವರು ನೋಂದಣಿ ಸಂಖ್ಯೆ ಮರೆಮಾಚಿ ದ್ವಿಚಕ್ರ ವಾಹನ ಸವಾರಿ ಮಾಡುತ್ತಿದ್ದರು. ಇದನ್ನು ಗಮನಿಸಿದ್ದ ವ್ಯಕ್ತಿಯೊಬ್ಬರು ಮೊಬೈಲ್‌ನಲ್ಲಿ ಫೋಟೊ ತೆಗೆದು ನಗರ ಸಂಚಾರ ಪೊಲೀಸ್ ವಿಭಾಗದ ‘ಎಕ್ಸ್’ ಖಾತೆಗೆ ಟ್ಯಾಗ್‌ ಮಾಡಿದ್ದರು. ಅದನ್ನು ಆಧರಿಸಿ ಸವಾರನನ್ನು ಪತ್ತೆ ಮಾಡಲಾಯಿತು ಎಂದು ಸಂಚಾರ ಪೂರ್ವ ವಿಭಾಗದ ಡಿಸಿಪಿ ಕುಲದೀಪ್‌ ಕುಮಾರ್‌ ಆರ್‌.ಜೈನ್ ತಿಳಿಸಿದ್ದಾರೆ.

ದಂಡ ಸಂಗ್ರಹ:
ಪೂರ್ವ ವಿಭಾಗದಲ್ಲಿ ಬುಧವಾರ ವಿಶೇಷ ಕಾರ್ಯಾಚರಣೆ ನಡೆಸಿ ಸಂಚಾರ ನಿಯಮ ಉಲ್ಲಂಘನೆ ಆರೋಪದ ಮೇಲೆ ದ್ವಿಚಕ್ರ ಸವಾರರು ಹಾಗೂ ವಾಹನ ಚಾಲಕರ ವಿರುದ್ಧ ಒಟ್ಟು 877 ಪ್ರಕರಣ ದಾಖಲು ಮಾಡಲಾಗಿದೆ. ಅವರಿಂದ ಒಟ್ಟು ₹4.38 ಲಕ್ಷ ದಂಡ ಸಂಗ್ರಹಿಸಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.