ADVERTISEMENT

ಅಕ್ರಮ ವಲಸೆ: ಮಾಹಿತಿ ನೀಡಲು ಸೂಚನೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2020, 20:18 IST
Last Updated 24 ಫೆಬ್ರುವರಿ 2020, 20:18 IST

ಬೆಂಗಳೂರು: ‘ವೀಸಾ ಅವಧಿ ಪೂರೈಸಿದ ವಿದೇಶಿಯರ ವಿರುದ್ಧ ಕೈಗೊಳ್ಳಲಾಗುವ ಕ್ರಮಗಳ ಬಗ್ಗೆ ನ್ಯಾಯಪೀಠಕ್ಕೆ ವಿವರಿಸಿ’ ಎಂದು ಹೈಕೋರ್ಟ್‌, ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಕುರಿತಂತೆ, ‘ಭಾರತ ಪುನರುತ್ಥಾನ ಟ್ರಸ್ಟ್‌’ ಕಾರ್ಯದರ್ಶಿ ಗಿರೀಶ್‌ ಭಾರದ್ವಾಜ್‌ ಹಾಗೂ ವಕೀಲ ಕೆ.ಬಿ.ವಿಜಯಕುಮಾರ್ ಸಲ್ಲಿಸಿರುವ ಸಾರ್ವಜನಿಕ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

‘ಈ ವಿಚಾರದಲ್ಲಿ ನಿಮ್ಮ ಬಳಿ ಏನಾದರೂ ಸಲಹೆ ಇದ್ದರೆ ನೀಡಿ’ ಎಂದು ಅರ್ಜಿದಾರರ ಪರ ವಕೀಲ ವೆಂಕಟೇಶ ಪಿ.ದಳವಾಯಿಗೆ ಸೂಚಿಸಿದ ನ್ಯಾಯಪೀಠ, ‘ಅಕ್ರಮವಾಗಿ ನೆಲೆಸಿರುವವರನ್ನು ಹೇಗೆ ಪತ್ತೆ ಹಚ್ಚುತ್ತೀರಿ ಎಂದು ತಿಳಿಸುವಂತೆ ಆದೇಶಿಸಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.