ಬೆಂಗಳೂರು: ಚಿತ್ರನಟ ಉಪೇಂದ್ರ ವಿರುದ್ಧದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ವಿಚಾರಣೆಯನ್ನು ಇದೇ 24ಕ್ಕೆ ಮುಂದೂಡಲಾಗಿದೆ.
ಪ್ರಾಸಿಕ್ಯೂಷನ್ ಪರವಾಗಿ ಎಸ್‌ಪಿಪಿ - 1 ಬೆಳ್ಳಿಯಪ್ಪ, ಉಪೇಂದ್ರ ಪರ ಹಿರಿಯ ವಕೀಲ ಉದಯ ಹೊಳ್ಳ ವಾದ ಮಂಡನೆ ಮಾಡಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ನೇರ ಪ್ರಸಾರದ ವೇಳೆ ಅವಹೇಳನಕಾರಿ ಪದ ಬಳಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆ ಎಫ್‌ಐಆರ್ ದಾಖಲಾಗಿತ್ತು.
ಉಪೇಂದ್ರ ಅವರ ಹೇಳಿಕೆಗೆ ರಾಜ್ಯಾದ್ಯಂತ ಹಲವು ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿತ್ತು. ನಟನ ಬಂಧನಕ್ಕೆ ಆಗ್ರಹಿಸಿ ಗೃಹ ಸಚಿವರ ನಿವಾಸಕ್ಕೆ ಬುಧವಾರ ಮುತ್ತಿಗೆ ಯತ್ನವವೂ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.