ADVERTISEMENT

ಎನ್ಇಪಿ: ರಾಜ್ಯ ಸರ್ಕಾರಕ್ಕೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 16:51 IST
Last Updated 11 ಜುಲೈ 2024, 16:51 IST
<div class="paragraphs"><p>ಹೈಕೋರ್ಟ್</p></div>

ಹೈಕೋರ್ಟ್

   

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) ಕೈಬಿಟ್ಟು ರಾಜ್ಯ ಶಿಕ್ಷಣ ನೀತಿ ಜಾರಿಗೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ADVERTISEMENT

ಈ ಸಂಬಂಧ ಹೈಕೋರ್ಟ್ ವಕೀಲ ಗಿರೀಶ್ ಭಾರಧ್ವಾಜ್ ಹಾಗೂ ಆರ್.ಆನಂದ ಮೂರ್ತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಂ. ಅರುಣ್ ಶ್ಯಾಮ್, ‘ರಾಜ್ಯ ಶಿಕ್ಷಣ ನೀತಿಯನ್ನು ಕೈಬಿಟ್ಟು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕಾರ್ಯರೂಪಕ್ಕೆ ತರುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಮನವಿ ಮಾಡಿದರು.

ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಆಗಸ್ಟ್ 1ಕ್ಕೆ ಮುಂದೂಡಿತು. ಕೇಂದ್ರ ಸರ್ಕಾರದ ಪರ ಡೆಪ್ಯುಟಿ ಸಾಲಿಸಿಟರ್ ಜನರಲ್ ಎಚ್. ಶಾಂತಿಭೂಷಣ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.