ADVERTISEMENT

ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ ಇದೇ 24ರಿಂದ

​ಪ್ರಜಾವಾಣಿ ವಾರ್ತೆ
Published 18 ಜೂನ್ 2024, 14:30 IST
Last Updated 18 ಜೂನ್ 2024, 14:30 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಹಿಂದೂ ಜನಜಾಗೃತಿ ಸಮಿತಿಯಿಂದ ಗೋವಾದ ಪೊಂಡಾ ನಗರದ ರಾಮನಾಥ ದೇವಸ್ಥಾನದಲ್ಲಿ ಜು.24ರಿಂದ 30ರವರೆಗೆ 12ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ ಆಯೋಜಿಸಲಾಗಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯ ವಕ್ತಾರ ಮೋಹನ್‌ಗೌಡ, ‘ಸನಾತನ ಧರ್ಮದ ವೈಚಾರಿಕ ಸುರಕ್ಷತೆ, ಹಿಂದೂ ಸಮಾಜ ಮತ್ತು  ಮಂದಿರ ಸಂಸ್ಕೃತಿಯ ರಕ್ಷಣೆಯ ಉಪಾಯಗಳು, ಹಲಾಲ್‌ ಅರ್ಥ ವ್ಯವಸ್ಥೆಯ ಬಗ್ಗೆ ಜಾಗೃತಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ತಜ್ಞರೊಂದಿಗೆ ಸಂವಾದಗಳು ನಡೆಯಲಿವೆ’ ಎಂದು ಹೇಳಿದರು.

ADVERTISEMENT

‘ಅಧಿವೇಶನದಲ್ಲಿ ಅಮೆರಿಕ, ಇಂಗ್ಲೆಂಡ್‌ ಮತ್ತು ಬಾಂಗ್ಲಾದೇಶ ಸೇರಿದಂತೆ ವಿವಿಧ ರಾಷ್ಟ್ರದ ಪ‍್ರತಿನಿಧಿಗಳು ಭಾಗವಹಿಸಲಿದ್ದಾರೆ. ದೇಶದ 26 ರಾಜ್ಯಗಳ ಒಂದು ಸಾವಿರಕ್ಕೂ ಹೆಚ್ಚಿನ ಸಂಘಟನೆಗಳು ಸೇರಿದಂತೆ ಎರಡು ಸಾವಿರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಇಂದೋರ್‌ನ ಮಹಾಮಂಡಲೇಶ್ವರದ ಸ್ವಾಮಿ ಪ್ರಣವಾನಂದ ಸರಸ್ವತಿ ಮಹಾರಾಜ, ನಿರ್ಗುಣನಂದಗಿರಿ ಮಹಾರಾಜ್, ಶ್ರೀರಾಮ ಜನ್ಮಭೂಮಿ, ಕಾಶಿ ಜ್ಞಾನವ್ಯಾಪಿ ಪ್ರಕರಣದ ನ್ಯಾಯವಾದಿ ಹರಿಶಂಕರ್ ಜೈನ್‌, ವಿಷ್ಣು ಶಂಕರ್ ಜೈನ್, ಹೈಕೋರ್ಟ್ ವಕೀಲ ಅಶ್ವಿನಿ ಉಪಾಧ್ಯಾಯ ಭಾಗವಹಿಸಲಿದ್ದಾರೆ’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.