ಬೆಂಗಳೂರು: ಮಹಿಳೆ ಮತ್ತು ಮಕ್ಕಳಿಗೆ ಸಂಬಂಧಪಟ್ಟ ಅಪರಾಧ ಪ್ರಕರಣಗಳ ತನಿಖೆಯನ್ನು ಯಶಸ್ವಿಯಾಗಿ ನಡೆಸಿ ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ಕ್ರಮ ವಹಿಸಿದ್ದ ರಾಜ್ಯದ ಐವರು ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವರ 2023ನೇ ಸಾಲಿನ ಪದಕ ಲಭಿಸಿದೆ.
ಕರ್ನಾಟಕ ಸಚಿವಾಲಯದ ಡಿವೈಎಸ್ಪಿ ಶಂಕರ್ ಎಂ. ರಾಗಿ, ತಾವರೆಕೆರೆ ಠಾಣೆ ಇನ್‌ಸ್ಪೆಕ್ಟರ್ ರಾಮಪ್ಪ ಬಿ. ಗುತ್ತೇರ, ಬೆಂಗಳೂರು ಹೈಗ್ರೌಂಡ್ಸ್ ಠಾಣೆ ಇನ್‌ಸ್ಪೆಕ್ಟರ್ ಸಿ.ಬಿ. ಶಿವಸ್ವಾಮಿ, ಆರ್‌ಎಂಸಿ ಯಾರ್ಡ್ ಠಾಣೆ ಇನ್‌ಸ್ಪೆಕ್ಟರ್ ಪಿ. ಸುರೇಶ್ ಹಾಗೂ ಶಿವಮೊಗ್ಗ ವಿನೋಬನಗರದ ಇನ್‌ಸ್ಪೆಕ್ಟರ್ ರುದ್ರೇಗೌಡ ಆರ್. ಪಾಟೀಲ ಅವರು ಪದಕಕ್ಕೆ ಭಾಜನರಾಗಿದ್ದಾರೆ.
‘ದೇಶದ 140 ಪೊಲೀಸ್ ಅಧಿಕಾರಿಗಳು ಈ ಬಾರಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ತನಿಖೆಯಲ್ಲಿ ಶ್ರೇಷ್ಠತೆ ಗುರುತಿಸುವ ಉದ್ದೇಶದಿಂದ 2018ರಿಂದ ಈ ಪದಕ ನೀಡಲಾಗುತ್ತಿದೆ’ ಎಂದು ಕೇಂದ್ರ ಗೃಹ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.