ADVERTISEMENT

ಉಪಚುನಾವಣೆ | ಬಚ್ಚೇಗೌಡ ಪುತ್ರನಿಗೆ ಟಿಕೆಟ್‌ ನೀಡುವಂತೆ ಕಾರ್ಯಕರ್ತರ ಆಗ್ರಹ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2019, 13:42 IST
Last Updated 1 ಡಿಸೆಂಬರ್ 2019, 13:42 IST
   

ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸಂಸದ ಬಿ.ಎನ್‌.ಬಚ್ಚೇಗೌಡ ಅವರ ಪುತ್ರ ಶರತ್‌ ಬಚ್ಚೇಗೌಡ ಅವರಿಗೇ ಟಿಕೆಟ್‌ ನೀಡುವಂತೆ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಆಗ್ರಹಿಸಿದರು.

ಬಚ್ಚೇಗೌಡ ಅವರ ಸಹೋದರ ಗೋಪಾಲಗೌಡ ಮತ್ತು ಉಳ್ಳೂರು ಮಂಜುನಾಥ ಅವರ ನೇತೃತ್ವದಲ್ಲಿ ಮಂಗಳವಾರ 150 ಕ್ಕೂ ಹೆಚ್ಚು ಕಾರ್ಯಕರ್ತರು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ಎಂ.ಟಿ.ಬಿ.‌ನಾಗರಾಜ್‌ ಅವರಿಗೆ ವಿಧಾನಪರಿಷತ್‌ಗೆ ಆಯ್ಕೆ ಮಾಡಿ, ಶರತ್‌ಗೆ ಟಿಕೆಟ್‌ ನೀಡಿ ಎಂದು ಮನವಿ ಮಾಡಿದರು.

‘ಅನರ್ಹ ಶಾಸಕ ಎಂ.ಟಿ.ಬಿ.ನಾಗರಾಜ್‌ ಅವರಿಗೆ ಟಿಕೆಟ್‌ ನೀಡಲು ಈಗಾಗಲೇ ತೀರ್ಮಾನಿಸಲಾಗಿದೆ’ ಎಂದು ಯಡಿಯೂರಪ್ಪ ಅವರು ತಮ್ಮನ್ನು ಭೇಟಿ ಮಾಡಿದ ಹೊಸಕೋಟೆ ಕಾರ್ಯಕರ್ತರಿಗೆ ತಿಳಿಸಿದರು ಎನ್ನಲಾಗಿದೆ.

ADVERTISEMENT

ಶರತ್‌ ಬಚ್ಚೇಗೌಡ ಪ್ರತಿಕ್ರಿಯೆ: ‘ಎಂಟಿಬಿ ನಾಗರಾಜ್‌ ಅವರಿಗೆ ಕೊಟ್ಟ ಮಾತಿನಂತೆ ಪಕ್ಷದಿಂದ ಟಿಕೆಟ್‌ ನೀಡಲು ತೀರ್ಮಾನಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಪಕ್ಷ ಸಂಘಟನೆಗಾಗಿ ದುಡಿದಿರುವ ನಾನು ಕೊನೇ ಕ್ಷಣದವರೆಗೂ ಹೋರಾಡುತ್ತೇನೆ. ಹಾಗೆಂದು ಕಾಂಗ್ರೆಸ್‌ ಸೇರುವ ಪ್ರಸ್ತಾವ ಇಲ್ಲ’ ಎಂದು ಶರತ್‌ ಹೇಳಿದರು.

ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನಿಸಲು ಶರತ್‌ ಅವರು ಇದೇ 27 ರಂದು ಹೋಬಳಿ ಮಟ್ಟದ ಕಾರ್ಯಕರ್ತರ ಸಭೆ ಕರೆದಿದ್ದಾರೆ. ಎಲ್ಲರ ಅಭಿಪ್ರಾಯ ಸ್ವೀಕರಿಸಿ ಮುಂದಿನ ತೀರ್ಮಾನ ಪ್ರಕಟಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.