ADVERTISEMENT

ಬೆಳ್ಳಂದೂರು ಕೆರೆ | ಹೂಳೆತ್ತಲು ಎಷ್ಟು ಸಮಯ ಬೇಕು: ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 21:27 IST
Last Updated 28 ಜುಲೈ 2020, 21:27 IST
ಬೆಳ್ಳಂದೂರು ಕೆರೆ
ಬೆಳ್ಳಂದೂರು ಕೆರೆ   

ಬೆಂಗಳೂರು: ಬೆಳ್ಳಂದೂರು ಮತ್ತು ವರ್ತೂರು ಕೆರೆಗಳ ಹೂಳು ತೆಗೆಯುವುದು ಮತ್ತು ತಾತ್ಕಾಲಿಕವಾಗಿ ನಿರ್ಮಿಸಿರುವ ಏರಿಗಳನ್ನು ತೆರವುಗೊಳಿಸಲು ಗರಿಷ್ಠ ಎಷ್ಟು ಕಾಲಾವಕಾಶ ಬೇಕು ಎಂಬುದರ ಕುರಿತ ವಿವರ ಸಲ್ಲಿಸುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಹೈಕೋರ್ಟ್ ನಿರ್ದೇಶನ ನೀಡಿದೆ.

ಗೀತಾ ಮಿಶ್ರಾ ಎಂಬುವರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ನೇಮಿಸಿರುವ ತಜ್ಞರ ಸಮಿತಿ ಇದರ ಮೇಲುಸ್ತುವಾರಿ ನೋಡಿಕೊಳ್ಳುತ್ತಿದೆ ಎಂದು ಬಿಡಿಎ ಅಧಿಕಾರಿಗಳು ನ್ಯಾಯಾಲಯದ ದಾರಿ ತಪ್ಪಿಸುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿತು.

‘ಅದರ ಅವಧಿ ಮಾ.31ರಂದೇ ಮುಕ್ತಾಯವಾಗಿದೆ ಎಂದು ಸಮಿತಿಯ ಅಧ್ಯಕ್ಷರಾಗಿದ್ದ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ತಿಳಿಸಿದ್ದಾರೆ’ ಎಂದು ಪೀಠ ಹೇಳಿತು.

ADVERTISEMENT

‘ಹೂಳೆತ್ತುವ ಕಾರ್ಯ ಮುಗಿದ ಬಳಿಕವೇ ತಾತ್ಕಾಲಿಕ ಏರಿಗಳನ್ನು ತೆರವುಗೊಳಿಸಲು ಸಾಧ್ಯ’ ಎಂದು ಬಿಡಿಎ ಪರ ವಕೀಲರು ಮಾಹಿತಿ ನೀಡಿದರು. ‘ಅದಕ್ಕೆ ಗರಿಷ್ಠ ಎಷ್ಟು ಕಾಲಾವಕಾಶ ಬೇಕು ಎಂಬುದರ ಕುರಿತು ಮಾಹಿತಿ ಒದಗಿಸಿ’ ಎಂದ ಪೀಠ, ಆಗಸ್ಟ್ 18ಕ್ಕೆ ವಿಚಾರಣೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.