ADVERTISEMENT

ಎಚ್‌ಎಸ್‌ಆರ್‌ಪಿ: ಸಾರಿಗೆ ಇಲಾಖೆಯಿಂದ ಸಹಾಯವಾಣಿ ಆರಂಭ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2024, 15:37 IST
Last Updated 17 ಫೆಬ್ರುವರಿ 2024, 15:37 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ಆನ್‌ಲೈನ್‌ನಲ್ಲಿ ನೋಂದಣಿ ವೇಳೆ ಸಮಸ್ಯೆ ಉಂಟಾದರೆ ನೆರವಾಗಲು ಸಾರಿಗೆ ಇಲಾಖೆಯು ಸಹಾಯವಾಣಿಯನ್ನು ಆರಂಭಿಸಿದೆ. ಸಾರ್ವಜನಿಕರು ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಸಹಾಯವಾಣಿ 9449863429/26 ಸಂಪರ್ಕಿಸಬಹುದು.

http://transport.karnataka.gov.in ಅಥವಾ www.siam.inಗೆ ಭೇಟಿ ನೀಡಿ ವಾಹನಗಳಿಗೆ ನೋಂದಣಿ ಫಲಕಗಳನ್ನು ಅಳವಡಿಸಿಕೊಳ್ಳಲು ಆನ್‌ಲೈನ್‌ ಮೂಲಕ ವಿವರಗಳನ್ನು ಒದಗಿಸಬೇಕು. ಫಲಕ ಅಳವಡಿಸುವ ದಿನಾಂಕ, ವಾಹನ ಮಾರಾಟ ಕೇಂದ್ರದ ಹೆಸರು ಮತ್ತು ವಿಳಾಸ ಖಚಿತಪಡಿಸಿಕೊಳ್ಳಬೇಕು.

ಈ ವೆಬ್‌ಸೈಟ್‌ಗಳ ಮೂಲಕ ನೋಂದಣಿ ಮಾಡಿ ಅಳವಡಿಸಿದ ಎಚ್‌ಎಸ್‌ಆರ್‌ಪಿಗಳು ಮಾತ್ರ ಮಾನ್ಯತೆ ಹೊಂದಿರುತ್ತವೆ. ಇತರ ವೆಬ್‌ ಪೋರ್ಟಲ್‌ ಬಳಸಬಾರದು ಎಂದು ಸಾರಿಗೆ ಮತ್ತು ಸುರಕ್ಷತೆ ಆಯುಕ್ತ ಎ.ಎಂ.ಯೋಗೀಶ್‌ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.