ADVERTISEMENT

ಬೆಂಗಳೂರು: ಮಾನವ ಹಕ್ಕುಗಳು-ಮಾಧ್ಯಮ ವಿಚಾರ ಸಂಕಿರಣ

​ಪ್ರಜಾವಾಣಿ ವಾರ್ತೆ
Published 31 ಜನವರಿ 2024, 15:39 IST
Last Updated 31 ಜನವರಿ 2024, 15:39 IST
ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಎನ್. ನರಸಿಂಹಮೂರ್ತಿ, ಕುಲಪತಿ ಲಿಂಗರಾಜ ಗಾಂಧಿ, ಕಾಮನ್ ವೆಲ್ತ್ ಮಾನವ ಹಕ್ಕುಗಳ ಸಂಘದ ನಿರ್ದೇಶಕ ವೆಂಕಟೇಶ ನಾಯಕ್ ಉಪಸ್ಥಿತರಿದ್ದರು.
ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಎನ್. ನರಸಿಂಹಮೂರ್ತಿ, ಕುಲಪತಿ ಲಿಂಗರಾಜ ಗಾಂಧಿ, ಕಾಮನ್ ವೆಲ್ತ್ ಮಾನವ ಹಕ್ಕುಗಳ ಸಂಘದ ನಿರ್ದೇಶಕ ವೆಂಕಟೇಶ ನಾಯಕ್ ಉಪಸ್ಥಿತರಿದ್ದರು.   

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಮೂಹ ಸಂವಹನ ವಿಭಾಗದ ವತಿಯಿಂದ ‘ಮಾನವ ಹಕ್ಕುಗಳು ಮತ್ತು ಮಾಧ್ಯಮ’ ಬಗ್ಗೆ ಬುಧವಾರ ವಿಚಾರ ಸಂಕಿರಣ ನಡೆಯಿತು.

ಕಾಮನ್ ವೆಲ್ತ್ ಮಾನವ ಹಕ್ಕುಗಳ ಸಂಘದ ನಿರ್ದೇಶಕ ವೆಂಕಟೇಶ ನಾಯಕ್ ಮಾತನಾಡಿ, ‘ಮಾನವ ಹಕ್ಕುಗಳ ಸಂರಕ್ಷಣೆಯಲ್ಲಿ ಮಾಧ್ಯಮದ ಪಾತ್ರ ಬಹಳ ಮಹತ್ವದ್ದು. ಮಾಹಿತಿ ಹಕ್ಕು ಕಾಯ್ದೆ ಮತ್ತು ಪತ್ರಿಕಾ ಸ್ವಾತಂತ್ರ್ಯದ ಪರಿಣಾಮಕಾರಿ ಬಳಕೆ ಮಾನವ ಹಕ್ಕುಗಳ ಸಂರಕ್ಷಣೆಗೆ ಪೂರಕವಾಗಬಲ್ಲದು. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಘೋಷಣೆಗೆ ಅನುಗುಣವಾಗಿ ಭಾರತ ಜಾರಿಗೊಳಿಸಿರುವ ಕಾಯ್ದೆಯ ಬಗ್ಗೆ ಜನಜಾಗೃತಿ ಮೂಡಿಸಬೇಕಿದೆ’ ಎಂದು ಹೇಳಿದರು.

ನಾಗರಿಕ ಮತ್ತು ರಾಜಕೀಯ ಹಕ್ಕುಗಳ ಜೊತೆಗೆ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಹಕ್ಕುಗಳ ಅನುಷ್ಠಾನದ ಬಗ್ಗೆ ಸರ್ಕಾರದ ವಿಶೇಷ ಗಮನ ಸೆಳೆಯಬೇಕಿದೆ ಎಂದು ಹೇಳಿದರು.

ADVERTISEMENT

ಕುಲಪತಿ ಲಿಂಗರಾಜ ಗಾಂಧಿ ಮಾತನಾಡಿ, ‘ಜಗತ್ತಿನಾದ್ಯಂತ ಪ್ರಜಾಪ್ರಭುತ್ವ ರಾಜಕೀಯ ವ್ಯವಸ್ಥೆ ವಿಕಾಸಗೊಂಡಿರುವುದರಿಂದ ಮಾನವ ಹಕ್ಕುಗಳ ಸಂರಕ್ಷಣೆ ಹೆಚ್ಚಿನ ಪ್ರಾಮುಖ್ಯ ಪಡೆದುಕೊಂಡಿದೆ’ ಎಂದು ವಿವರಿಸಿದರು.

ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಎನ್. ನರಸಿಂಹಮೂರ್ತಿ ಉಪಸ್ಥಿತರಿದ್ದರು. ಇತಿಹಾಸ, ರಾಜ್ಯಶಾಸ್ತ್ರ. ಸಮಾಜ ಕಾರ್ಯ ವಿಭಾಗಗಳ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.