ಬೆಂಗಳೂರು: ‘ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿದ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ನಂತರ ಜೈಲಿನಿಂದ ಬಿಡುಗಡೆಯಾಗುವ ವಿದೇಶಿಯರನ್ನು ತಾತ್ಕಾಲಿಕ ವಶದಲ್ಲಿರಿಸಿಕೊಳ್ಳಲಾಗುವ ಕೇಂದ್ರದಲ್ಲಿ (ಡಿಟೆನ್ಶನ್ ಸೆಂಟರ್) ಇರಿಸಲಾಗುವುದು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ನ್ಯಾಯಾಂಗ ಬಂಧನದಲ್ಲಿರುವ ಬಾಂಗ್ಲಾದ ಬಾಬುಲ್ ಖಾನ್ ಮತ್ತು ತಾನಿಯಾ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಖುದ್ದು ಹಾಜರಿದ್ದ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಈ ಕುರಿತಂತೆ ನ್ಯಾಯಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಿದರು.
ಡಿಟೆನ್ಶನ್ ಸೆಂಟರ್: ‘ಬೆಂಗಳೂರು ಉತ್ತರ ತಾಲ್ಲೂಕಿನ ಸೊಂಡೇಕೊಪ್ಪದಲ್ಲಿ ತಾತ್ಕಾಲಿಕ ಕೇಂದ್ರಕ್ಕೆ (ಡಿಟೆನ್ಷನ್ ಸೆಂಟರ್) ಕಟ್ಟಡ ಗುರುತಿಸಲಾಗಿದೆ. ಈ ಕೇಂದ್ರ 2020ರ ಜನವರಿ 1ರಿಂದ ಕಾರ್ಯಾರಂಭ ಮಾಡಲಿದೆ’ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.