ADVERTISEMENT

ಬಿಲ್ಡರ್‌ಗಳಿಂದ ಹಣದ ಅಕ್ರಮ ವಹಿವಾಟಿನ ಆರೋಪ; 13 ಸ್ಥಳಗಳಲ್ಲಿ ಇ.ಡಿ ಶೋಧ

​ಪ್ರಜಾವಾಣಿ ವಾರ್ತೆ
Published 24 ಜೂನ್ 2024, 23:30 IST
Last Updated 24 ಜೂನ್ 2024, 23:30 IST
<div class="paragraphs"><p>ಇ.ಡಿ</p></div>

ಇ.ಡಿ

   

(ಸಂಗ್ರಹ ಚಿತ್ರ)

ಬೆಂಗಳೂರು: ಹಣದ ಅಕ್ರಮ ವಹಿವಾಟಿನ ಆರೋಪದಡಿ ಬಿಲ್ಡರ್‌ಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಜಾರಿ ನಿರ್ದೇಶನಾಲಯ, ಬೆಂಗಳೂರಿನ 11 ಮತ್ತು ಮೈಸೂರಿನ ಎರಡು ಸ್ಥಳಗಳಲ್ಲಿ ಸೋಮವಾರ ಶೋಧ ನಡೆಸಿದೆ.

ADVERTISEMENT

ಬೆಂಗಳೂರಿನ ಯು.ಬಿ. ಸಿಟಿ, ಮಲ್ಲೇಶ್ವರ, ಬಸವೇಶ್ವರನಗರ, ಹನುಮಂತನಗರ, ಬನ್ನೇರುಘಟ್ಟ ರಸ್ತೆಯಲ್ಲಿರುವ ಬಿಲ್ಡರ್‌ಗಳ ಕಚೇರಿ ಹಾಗೂ ಮನೆಗಳ ಮೇಲೆ ಸೋಮವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿಮಾಡಿದ ಇ.ಡಿ ಅಧಿಕಾರಿಗಳು, ಸಂಜೆಯವರೆಗೂ ಶೋಧ ನಡೆಸಿದರು. ಮೈಸೂರಿನಲ್ಲೂ ಬಿಲ್ಡರ್‌ಗಳಿಗೆ ಸೇರಿದ ಎರಡು ಸ್ಥಳಗಳ ಮೇಲೆ ದಾಳಿಮಾಡಿ ಶೋಧ ನಡೆಸಿದರು.

ಯು.ಬಿ. ಸಿಟಿ ಸೇರಿದಂತೆ ಕೆಲವು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ವೇಳೆ ಸ್ಥಳೀಯ ಪೊಲೀಸರು ರಕ್ಷಣೆ ಒದಗಿಸಿದ್ದರು. ಇನ್ನು ಕೆಲವು ಸ್ಥಳಗಳಲ್ಲಿ ಕಾರ್ಯಾಚರಣೆಗೆ ಕೇಂದ್ರೀಯ ಪೊಲೀಸ್‌ ಪಡೆಗಳ ತಂಡವನ್ನೇ ಇ.ಡಿ ಅಧಿಕಾರಿಗಳು ಬಳಸಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

ರಿಯಲ್‌ ಎಸ್ಟೇಟ್‌ ಉದ್ಯಮಿಗಳು ತೆರಿಗೆ ವಂಚಿಸಿ, ಅಕ್ರಮವಾಗಿ ಹಣದ ವಹವಾಟು ನಡೆಸುತ್ತಿರುವ ಆರೋಪದ ಕುರಿತು ಇ.ಡಿಗೆ ದೂರುಗಳು ಬಂದಿದ್ದವು. ಪ್ರಾಥಮಿಕ ಪರಿಶೀಲನೆ ನಡೆಸಿದ ಬಳಿಕ ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.