ADVERTISEMENT

ಬೆಂಗಳೂರು | ಅಕ್ರಮ ವಾಸ: 10 ವಿದೇಶಿಯರ ಮನೆ ಮೇಲೆ ದಾಳಿ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2024, 15:31 IST
Last Updated 2 ಏಪ್ರಿಲ್ 2024, 15:31 IST
<div class="paragraphs"><p>ಸಿಸಿಬಿ ಸಂಗ್ರಹ ಚಿತ್ರ </p></div>

ಸಿಸಿಬಿ ಸಂಗ್ರಹ ಚಿತ್ರ

   

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ಮಾಹಿತಿ ಮೇರೆಗೆ 10 ವಿದೇಶಿಯರ ಮನೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಕೆಲವರನ್ನು ವಶಕ್ಕೆ ಪಡೆದಿದ್ದಾರೆ.

‘ರಾಮಮೂರ್ತಿನಗರ, ಸೋಲದೇವನಹಳ್ಳಿ, ಕೆ.ಆರ್. ಪುರ, ಹೆಣ್ಣೂರು, ಕೆ.ಜಿ.ಹಳ್ಳಿ ಹಾಗೂ ಆರ್.ಟಿ. ನಗರ ಠಾಣೆ ವ್ಯಾಪ್ತಿಯಲ್ಲಿ ವಿದೇಶಿಯವರು ಅಕ್ರಮವಾಗಿ ವಾಸವಿದ್ದ ಮಾಹಿತಿ ಇತ್ತು. ಹೀಗಾಗಿ, ದಾಳಿ ಮಾಡಿ ಪರಿಶೀಲನೆ ನಡೆಸಲಾಯಿತು’ ಎಂದು ಪೊಲೀಸರು ಹೇಳಿದರು.

ADVERTISEMENT

‘ನೈಜೀರಿಯಾದ ಕೋವಾಸೆ ಎಂಬಾತನ ಮನೆಯಲ್ಲಿ ₹ 22 ಲಕ್ಷ ಮೌಲ್ಯದ 105 ಗ್ರಾಂ ಕೊಕೇನ್, 110 ಗ್ರಾಂ ಎಂಡಿಎಂಎ ಮಾತ್ರೆಗಳು ಸಿಕ್ಕಿವೆ. ಕೋವಾಸೆ ಒಂದೂವರೆ ವರ್ಷದಿಂದ ನಗರದಲ್ಲಿ ಅಕ್ರಮವಾಗಿ ವಾಸವಿದ್ದ. ಮಾದಕ ವಸ್ತು ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದ. ಈತನಿಂದ ಡ್ರಗ್ಸ್ ಹಾಗೂ ಇತರೆ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ’ ಎಂದರು.

‘10 ವಿದೇಶಿಯರ ದಾಖಲೆಗಳನ್ನು ಸುಪರ್ದಿಗೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ. ಬಹುತೇಕರು ಅಕ್ರಮವಾಗಿ ವಾಸವಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.