ಬೆಂಗಳೂರು: ‘ಐಎಂಎ ಹಗರಣದಲ್ಲಿ ಮಾಜಿ ಶಾಸಕ ಆರ್.ರೋಷನ್ ಬೇಗ್ ಆಸ್ತಿ ಮುಟ್ಟುಗೋಲು ವಿಷಯದಲ್ಲಿ ಸರ್ಕಾರ ತನ್ನ ನಿರ್ಧಾರ ಮರುಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು’ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಐಎಂಎ ಹಗರಣಗಳ ಕುರಿತು ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.
‘ರೋಷನ್ ಬೇಗ್ ವಿರುದ್ಧ ಸಿಬಿಐ ನಡೆಸುತ್ತಿರುಗ ತನಿಖೆ ಮುಗಿದಿಲ್ಲ. ಈ ಹಂತದಲ್ಲಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಸಾಧ್ಯವಿಲ್ಲ’ ಎಂಬ ಸರ್ಕಾರದ ಹೇಳಿಕೆಗೆ ಪೀಠ ಅಸಮಾಧಾನ ವ್ಯಕ್ತಪಡಿಸಿತು. ‘ಈ ಪ್ರಕರಣದಲ್ಲಿ ಸರ್ಕಾರ ತನ್ನ ಅಧಿಕಾರ ಬಳಸುತ್ತಿಲ್ಲ. ರೋಷನ್ ಬೇಗ್ ಮತ್ತು ಐಎಂಎ ನಡುವಿನ ವ್ಯವಹಾರ ಕುರಿತು ಸಿಬಿಐ ತನಿಖೆ ನಡೆಸುತ್ತಿದೆ. ಆಸ್ತಿ ಮುಟ್ಟುಗೋಲಿಗೆ ಸಿಬಿಐ ವರದಿಗಾಗಿ ಕಾಯುವ ಅಗತ್ಯವಿಲ್ಲ’ ಎಂದು ಪೀಠ ಹೇಳಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.