ADVERTISEMENT

Lalbagh Flower Show | ಫಲಪುಷ್ಪ ಪ್ರದರ್ಶನದಲ್ಲಿ ಜನಸಾಗರ

ಸ್ವಾತಂತ್ರಯೋತ್ಸವದ ದಿನ ಲಾಲ್‌ಭಾಗ್‌ಗೆ 2.1 ಲಕ್ಷ ಜನರ ಭೇಟಿ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2024, 4:26 IST
Last Updated 16 ಆಗಸ್ಟ್ 2024, 4:26 IST
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಲಾಲ್‌ಬಾಗ್‌ನಲ್ಲಿ ನಡೆಯುತ್ತಿರುವ ಫಲ‍ಪುಷ್ಪ ಪ್ರದರ್ಶನ ವೀಕ್ಷಣೆಗೆ ಸಾರ್ವಜನಿಕರು ಗುರುವಾರ ಭಾರಿ ಸಂಖ್ಯೆಯಲ್ಲಿ ಬಂದಿದ್ದರು
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಲಾಲ್‌ಬಾಗ್‌ನಲ್ಲಿ ನಡೆಯುತ್ತಿರುವ ಫಲ‍ಪುಷ್ಪ ಪ್ರದರ್ಶನ ವೀಕ್ಷಣೆಗೆ ಸಾರ್ವಜನಿಕರು ಗುರುವಾರ ಭಾರಿ ಸಂಖ್ಯೆಯಲ್ಲಿ ಬಂದಿದ್ದರು   

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಲಾಲ್‌ಬಾಗ್‌ನಲ್ಲಿ ನಡೆಯುತ್ತಿರುವ ‘ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್’ ವಿಷಯ ಆಧಾರಿತ ಫಲ‍ಪುಷ್ಪ ಪ್ರದರ್ಶನ’ಕ್ಕೆ ಗುರುವಾರ 2.1 ಲಕ್ಷ ಮಂದಿ ಭೇಟಿ ನೀಡಿದ್ದಾರೆ.

1.28 ಲಕ್ಷ ವಯಸ್ಕರು, 81 ಸಾವಿರ ಮಕ್ಕಳು ಭೇಟಿ ನೀಡಿದ್ದು, ಪ್ರವೇಶ ಶುಲ್ಕ ₹ 92.5 ಲಕ್ಷ ಸಂಗ್ರಹವಾಗಿದೆ ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಎಂ. ಜಗದೀಶ್‌ ತಿಳಿಸಿದ್ದಾರೆ.

ಸ್ವಾತಂತ್ರ್ಯ ದಿನವನ್ನು ಆಚರಿಸಿದ ಬಳಿಕ ಬಹುತೇಕರು ಲಾಲ್‌ಭಾಗ್‌ಗೆ ಭಾರಿ ಸಂಖ್ಯೆಯಲ್ಲಿ ಭೇಟಿ ನೀಡಿದರು. ಬಂಡೆ, ಕೆರೆ ಏರಿ, ಬೋನ್ಸಾಯ್, ತರಕಾರಿ ಉದ್ಯಾನ, ಮಾರಾಟ ಮಳಿಗೆಗಳ ಬಳಿ ಕಿಕ್ಕಿರಿದ ಜನಸಂದಣಿ ಇತ್ತು. ಗಾಜಿನ ಮನೆಯಲ್ಲಿ ಜನದಟ್ಟಣೆ ಉಂಟಾಗಿ, ಸಾಲುಗಳನ್ನು ನಿಯಂತ್ರಿಸಲು ತೋಟಗಾರಿಕೆ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಹರಸಾಹಸಪಟ್ಟರು.

ADVERTISEMENT

ಟಿಕೆಟ್‌ ಪಡೆಯಲು ಸಹ ಜನರು ಸಾಲಿನಲ್ಲಿ ನಿಂತು ಕಾಯಬೇಕಾಯಿತು. ಇದರಿಂದ ಮಕ್ಕಳು ಹಾಗೂ ವೃದ್ಧರು ಸಮಸ್ಯೆ ಎದುರಿಸಿದರು. ಲಾಲ್‌ಬಾಗ್ ಮುಖ್ಯ ಗೇಟಿನ ರಸ್ತೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದರೂ ಸಂಚಾರ ದಟ್ಟಣೆ ಉಂಟಾಗಿತ್ತು. ಉದ್ಯಾನದ ನಾಲ್ಕು ಪ್ರವೇಶ ದ್ವಾರಗಳ ಪಾದಚಾರಿ ಮಾರ್ಗದಲ್ಲಿ ಕಿರು ಮಾರುಕಟ್ಟೆಗಳೇ ಸೃಷ್ಟಿಯಾಗಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.