ADVERTISEMENT

ತಲಾ ಆದಾಯದಲ್ಲಿ ಭಾರತಕ್ಕೆ133ನೇ ಸ್ಥಾನ: ಆತಂಕಕಾರಿ ಎಂದ ನಿರ್ಮಲಾನಂದನಾಥ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2024, 15:53 IST
Last Updated 29 ಅಕ್ಟೋಬರ್ 2024, 15:53 IST
ಬಿ.ಇ ತರಗತಿಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ನಗದು ಪುರಸ್ಕಾರ ನೀಡಿದರು.
ಬಿ.ಇ ತರಗತಿಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ನಗದು ಪುರಸ್ಕಾರ ನೀಡಿದರು.   

ಕೆಂಗೇರಿ: ‘ಭಾರತವು ವಿಶ್ವದಲ್ಲಿ 5ನೇ ದೊಡ್ಡ ಆರ್ಥಿಕತೆ ಹೊಂದಿದ ರಾಷ್ಟ್ರವಾಗಿ ರೂಪುಗೊಂಡಿದ್ದರೂ, ತಲಾದಾಯದಲ್ಲಿ 133ನೇ ಸ್ಥಾನ ಹೊಂದಿರುವುದು ಆತಂಕಕಾರಿ ಬೆಳವಣಿಗೆ’ ಎಂದು ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ಬಿಜಿಎಸ್ಐಟಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಥಮ ಬಿ.ಇ ತರಗತಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

’ಭಾರತ, ಅಪಾರ ಯುವ ಮಾನವ ಸಂಪನ್ಮೂಲವನ್ನು ಹೊಂದಿದೆ. ಈ ಸಂಪನ್ಮೂಲವನ್ನು ಬಳಸಿಕೊಂಡು ಎಲ್ಲಾ ರಂಗಗಳಲ್ಲೂ ಅಭಿವೃದ್ಧಿ ಸಾಧಿಸಬೇಕಾದ ಜರೂರಿದೆ’ ಎಂದು ಅಭಿಪ್ರಾಯಪಟ್ಟರು.

ADVERTISEMENT

ಡಾ. ಜಗದೀಶ್ ಗೋಪಾಲನ್ ಮಾತನಾಡಿ, ‘ಜ್ಞಾನಾರ್ಜನೆ ನಿರಂತರ ಪ್ರಕ್ರಿಯೆ. ಜಾಗತಿಕ ಬೇಡಿಕೆಗಳಿಗೆ ಅನುಗುಣವಾಗಿ ನಮ್ಮನ್ನು ನಾವು ಅಣಿಗೊಳಿಸಿಕೊಂಡರೆ ಯಾವುದೇ ರಂಗದಲ್ಲೂ ಯಶಸ್ಸು ಪಡೆದುಕೊಳ್ಳಲು ಸಾಧ್ಯವಾಗುತ್ತದೆ’ ಎಂದರು.

‘ವಿಜ್ಞಾನ ವಿಷಯ ಹಣ ಮಾಡುವ ವಿಭಾಗವಲ್ಲ. ಆಸಕ್ತ ವಿದ್ಯಾರ್ಥಿಗಳು ಈ ವಿಷಯದಲ್ಲಿ ತೊಡಗಿಕೊಂಡರೆ ಉತ್ತಮ ಸಾಧನೆ ಮಾಡಬಹುದು‘ ಎಂದು ಪ್ರೊ.ಕೆ.ಎನ್.ಗಣೇಶ್ ಹೇಳಿದರು.

ಇದೇ ವೇಳೆ ಬಿ.ಇ ತರಗತಿಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಲಾಯಿತು.

ಟಾಟಾ ಕನ್ಸಲ್ಟೆನ್ಸಿ ಕೇಂದ್ರೀಯ ಮುಖ್ಯಸ್ಥ ಸುನೀಲ್ ದೇಶಪಾಂಡೆ ಮಾತನಾಡಿದರು. ಬಿಜಿಎಸ್ ಮತ್ತು ಎಸ್.ಜೆ.ಬಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶನಾಥ ಸ್ವಾಮೀಜಿ, ನಟ ವಿರಾಟ್, ನಟಿ ತಪಸ್ವಿನಿ ಪೂಣಚ್ಚ, ಪ್ರಾಂಶುಪಾಲ ಮಹೇಂದ್ರ ಪ್ರಶಾಂತ್, ಅಮರ್‌ನಾಥ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.