ಬೆಂಗಳೂರು: ಇಂಡಿಯನ್ ಆಯಿಲ್ ಕಂಪನಿಯನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ರಾಷ್ಟ್ರೀಯ ಕ್ರೀಡಾ ಪುರಸ್ಕಾರ ಲಭಿಸಿರುವುದು ಸಂತಸದ ಸಂಗತಿ ಎಂದು ಕಂಪನಿ ಹೇಳಿದೆ.
‘ಭಾರತೀಯ ಕ್ರಿಕೆಟ್ ತಂಡದ ಆಟಗಾರ ರೋಹಿತ್ ಶರ್ಮಾ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದ ಪದಕ ವಿಜೇತೆ, ಟೇಬಲ್ ಟೆನ್ನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಅವರಿಗೆ ರಾಜೀವ್‌ಗಾಂಧಿ ಖೇಲ್ ರತ್ನ ಪುರಸ್ಕಾರ ಸಂದಿದೆ. ಇವರು ನಮ್ಮ ಕಂಪನಿಯ ಉದ್ಯೋಗಿಗಳು ಎನ್ನುವುದು ಹೆಮ್ಮೆಯ ವಿಚಾರ. ಇಬ್ಬರನ್ನೂ ಹೃದಯಪೂರ್ವಕವಾಗಿ ಅಭಿನಂದಿಸುತ್ತೇನೆ’ ಎಂದು ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ರಂಜನ್ ಕುಮಾರ್ ಮಹಾಪಾತ್ರ ಹೇಳಿದ್ದಾರೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಿಗಮವು 150ಕ್ಕೂ ಹೆಚ್ಚು ಕ್ರೀಡಾಪಟುಗಳಿಗೆ ಉದ್ಯೋಗ ನೀಡಿದೆ. ಸದ್ಯ, 90ಕ್ಕೂಹೆಚ್ಚು ಕ್ರೀಡಾಪಟುಗಳು ವಿವಿಧ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.