ಬೆಂಗಳೂರು: ಇನ್ಫೊಸಿಸ್ ಫೌಂಡೇಷನ್, ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ
50 ಕಂಪ್ಯೂಟರ್‌ಗಳನ್ನು ಕೊಡುಗೆಯಾಗಿ ನೀಡಿದೆ.
‘ವಿಶ್ವವಿದ್ಯಾಲಯದ ಇ–ಆಡಳಿತ ವಿಭಾಗದಿಂದ ಕಂಪ್ಯೂಟರ್ ಪ್ರಯೋಗಾ ಲಯ ಆರಂಭಿಸಲಾಗುತ್ತಿದೆ. ಹೀಗಾಗಿ ಇನ್ಫೊಸಿಸ್ ಫೌಂಡೇಷನ್ 50 ಕಂಪ್ಯೂಟರ್‌ಗಳನ್ನು ಒದಗಿಸಿದೆ. ಇದರಿಂದ ಸ್ನಾತಕೋತ್ತರ ಪದವಿ ಹಾಗೂ ಸಂಶೋಧನೆಯಲ್ಲಿ ತೊಡಗಿಕೊಂಡಿ
ರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ’ ಎಂದು ಕುಲಪತಿ ಪ್ರೊ.ಕೆ.ಇ.ದೇವನಾಥನ್ ತಿಳಿಸಿದ್ದಾರೆ.
‘ವಿದ್ಯಾರ್ಥಿಗಳ ಹಿತ ಗಮನದಲ್ಲಿ ಟ್ಟುಕೊಂಡು ಕಂಪ್ಯೂಟರ್‌ಗಳನ್ನು ಒದಗಿಸಿರುವ ಇನ್ಫೊಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಅವರಿಗೆ ನಾವು ಆಭಾರಿಯಾಗಿದ್ದೇವೆ. ಇವರ ಕಾರ್ಯ ಇತರರಿಗೂ ಮಾದರಿಯಾಗಲಿ’ ಎಂದು ಕುಲಸಚಿವ ಪ್ರೊ.ಎಂ.ಕೊಟ್ರೇಶ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.