ADVERTISEMENT

ಕನ್ನಡ ಕೃಷಿ ಪುಸ್ತಕ ಪ್ರಶಸ್ತಿಗೆ ಆಹ್ವಾನ

​ಪ್ರಜಾವಾಣಿ ವಾರ್ತೆ
Published 16 ಜೂನ್ 2024, 14:51 IST
Last Updated 16 ಜೂನ್ 2024, 14:51 IST
<div class="paragraphs"><p>ಬೆಂಗಳೂರು ಕೃಷಿ ವಿಶ್ವವಿದ್ಯಾಲಯ</p></div>

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ

   

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು (ಜಿಕೆವಿಕೆ) 2024ನೇ ಸಾಲಿಗೆ ‘ಕನ್ನಡ ಕೃಷಿ ಪುಸ್ತಕ’ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಿದೆ.

2023ರ ಜನವರಿಯಿಂದ ಡಿಸೆಂಬರ್‌ ಒಳಗೆ ಪ್ರಕಟವಾಗಿರುವ ಕೃಷಿ ಸಂಬಂಧಿತ ಪುಸ್ತಕಗಳನ್ನು ಪ್ರಶಸ್ತಿ ಆಯ್ಕೆಗೆ ಕಳುಹಿಸಬಹುದು.

ADVERTISEMENT

ಪ್ರಶಸ್ತಿಯು ₹10 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಲೇಖಕರಿಗೆ ಮಾತ್ರ ಪ್ರಶಸ್ತಿ ನೀಡಲಾಗುತ್ತದೆ. ಪುಸ್ತಕದ ಮೂರು ಪ್ರತಿಗಳನ್ನು ಸ್ವವಿವರಗಳೊಂದಿಗೆ ಜುಲೈ 15ರ ಒಳಗೆ ಮುಖ್ಯಸ್ಥರು, ಕನ್ನಡ ಅಧ್ಯಯನ ವಿಭಾಗ, ಕೃಷಿ ವಿಶ್ವವಿದ್ಯಾಲಯ, ಜಿಕೆವಿಕೆ, ಬೆಂಗಳೂರು–560065 ಇಲ್ಲಿಗೆ ಕಳುಹಿಸಬೇಕು.

ವಿವರಗಳಿಗೆ http://uasbangalore.edu.in ವೆಬ್‌ತಾಣಕ್ಕೆ ಭೇಟಿ ನೀಡಬಹುದು. kannada.uas@gmail.com ಇ–ಮೇಲ್‌ ಅಥವಾ ದೂರವಾಣಿ ಸಂಖ್ಯೆ 080 23330153/373 ಸಂಪರ್ಕಿಸಬಹುದು ಎಂದು ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥ ಜಿ. ವೀರಭದ್ರಗೌಡ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.