ADVERTISEMENT

ಭೋವಿ ನಿಗಮದ ಅಕ್ರಮ: ಆರೋಪಿ ಮಹಿಳೆ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2024, 18:30 IST
Last Updated 22 ನವೆಂಬರ್ 2024, 18:30 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ಜೀವಾ (35) ಅವರು, ‘ವಿಚಾರಣೆ ನೆಪದಲ್ಲಿ ಸಿಐಡಿ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿ ಪತ್ರ ಬರೆದಿಟ್ಟು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ADVERTISEMENT

‘ವಕೀಲಿ ವೃತ್ತಿ ನಡೆಸುತ್ತಿದ್ದ ಆರೋಪಿ, ನಿಗಮದ ಫಲಾನುಭವಿಗಳಿಗೆ ವಿವಿಧ ಸಾಮಗ್ರಿಗಳನ್ನು ಪೂರೈಕೆ ಮಾಡಿದ್ದರು. ಹಾಗಾಗಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ನೋಟಿಸ್ ಕಳುಹಿಸಿದ್ದರು. ಗುರುವಾರ ವಿಚಾರಣೆಗೆ ಹಾಜರಾಗಿ ಮನೆಗೆ ವಾಪಸ್ ಆಗಿದ್ದರು. ಶುಕ್ರವಾರ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಸಿಐಡಿಯ ತನಿಖಾಧಿಕಾರಿ ಕನಕಲಕ್ಷ್ಮಿ ಅವರು ವಿಚಾರಣೆ ನೆಪದಲ್ಲಿ ಕಿರುಕುಳ ನೀಡಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಪದ್ಮನಾಭ ನಗರದ ಜೀವಾ ಅವರ ನಿವಾಸದಲ್ಲಿ ದೊರೆತಿರುವ 11 ಪುಟಗಳ ಮರಣ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಆತ್ಮಹತ್ಯೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಬನಶಂಕರಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ಭೋವಿ ಅಭಿವೃದ್ಧಿ ನಿಗಮದಲ್ಲಿ ಹಲವು ವರ್ಷಗಳಿಂದ ನಡೆದಿವೆ ಎನ್ನಲಾಗಿರುವ ಅವ್ಯವಹಾರಗಳ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.