ADVERTISEMENT

‘ಉನ್ನತ ಭಾರತ ಅಭಿಯಾನ’ದಲ್ಲಿ ಐಎಸ್‌ಬಿಆರ್ ಕಾಲೇಜು

​ಪ್ರಜಾವಾಣಿ ವಾರ್ತೆ
Published 6 ಜೂನ್ 2022, 19:43 IST
Last Updated 6 ಜೂನ್ 2022, 19:43 IST
ಉನ್ನತ ಭಾರತ ಅಭಿಯಾನದ ಲೋಗೊ
ಉನ್ನತ ಭಾರತ ಅಭಿಯಾನದ ಲೋಗೊ   

ಬೊಮ್ಮನಹಳ್ಳಿ: ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯಿಂದ ಕೈಗೊಂಡಿರುವ ‘ಉನ್ನತ ಭಾರತ ಅಭಿಯಾನ’ದಲ್ಲಿ ಎಲೆಕ್ಟ್ರಾನಿಕ್ ಸಿಟಿಯಲ್ಲಿನ ಐಎಸ್‌ಬಿಆರ್ ಕಾಲೇಜು ಭಾಗಿಯಾಗಲಿದೆ.

ಆತ್ಮನಿರ್ಭರ್ ಭಾರತಕ್ಕಾಗಿ ಶಿಕ್ಷಣ ಸಂಸ್ಥೆಗಳನ್ನು ಬಳಸಿಕೊಂಡು ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಕೈಜೋಡಿಸಲು ಐಎಸ್‌ಬಿಆರ್ ಕಾಲೇಜು ಸಿದ್ಧವಾಗಿದೆ.

ಕಾಲೇಜಿನ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳನ್ನೊಳಗೊಂಡ ಯೋಜನಾ ತಂಡವು ಗ್ರಾಮಗಳ ಸಮೀಕ್ಷೆ ನಡೆಸಿ ಪ್ರಾಥಮಿಕ ಮಾಹಿತಿ, ಅಂಕಿ–ಅಂಶಗಳನ್ನು ಸಂಗ್ರಹಿಸುತ್ತದೆ. ತರುವಾಯ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ, ವಾಸ್ತವ ಮಾಹಿತಿಗೂ ಸರ್ಕಾರದ ಬಳಿ ಇರುವ ಅಂಕಿ–ಅಂಶಕ್ಕೂ ಇರುವ ವ್ಯತ್ಯಾಸಗಳನ್ನು ಗುರುತಿಸಲಿದೆ. ವಸ್ತುಸ್ಥಿತಿಗೆ ತಕ್ಕಂತೆ ಗ್ರಾಮದ ಅಭಿವೃದ್ಧಿಗೆ ನೀಲನಕ್ಷೆ ತಯಾರಿಸುವ ವಿಶಿಷ್ಟ ಯೋಜನೆ ಇದಾಗಿದೆ ಎಂದು ಕಾಲೇಜಿನ ಮೂಲಗಳು ತಿಳಿಸಿವೆ.

ADVERTISEMENT

‘ಸರ್ಕಾರದ ಮಹತ್ವದ ಯೋಜನೆಯೊಂದರಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸುವುದರಿಂದ ಅವರು ಗ್ರಾಮೀಣ ಭಾರತವನ್ನು ಅರ್ಥ ಮಾಡಿಕೊಳ್ಳಲು ಸಹಾಯವಾಗಲಿದೆ. ವಿದ್ಯಾರ್ಥಿಗಳಿಗೆ ವಿಶೇಷ ಅನುಭವವೂ ಸಿಗಲಿದ್ದು, ಭವಿಷ್ಯದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ವಿಷಯದಲ್ಲಿ ಆಸಕ್ತಿ ಮೂಡಿಸಲು ಸಹಾಯಕವಾಗಲಿದೆ. ಇದರಿಂದ ದೇಶದ ತಳಮಟ್ಟದ ಅಭಿವೃದ್ಧಿಯನ್ನು ನಿರೀಕ್ಷಿಸಬಹುದು' ಎಂದು ಐಎಸ್‌ಬಿಆರ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಮನೀಷ್ ಕೊಠಾರಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.