ಬೆಂಗಳೂರು: ಹೈದರಾಬಾದ್‌ನ ಮೇಘನಾ ಫುಡ್ಸ್ ಸಮೂಹದ ಬಿರಿಯಾನಿ ಹೋಟೆಲ್‌ಗಳ ಮೇಲೆ ಮಂಗಳವಾರ ದಾಳಿ ನಡೆಸಿರುವ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು, ಇಡೀ ದಿನ ಶೋಧ ನಡೆಸಿದರು.
ಕೋರಮಂಗಲ, ಇಂದಿರಾನಗರ, ಜಯನಗರ, ರೆಸಿಡೆನ್ಸಿ ರಸ್ತೆ, ಮಾರತ್ತಹಳ್ಳಿ ಸೇರಿದಂತೆ ಬೆಂಗಳೂರಿನ ಹಲವೆಡೆ ಮೇಘನಾ ಫುಡ್ಸ್‌ನ ಹೋಟೆಲ್‌ಗಳಿವೆ. ನಗರದಲ್ಲಿರುವ ಎಂಟಕ್ಕೂ ಹೆಚ್ಚು ಮಳಿಗೆಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೇಘನಾ ಫುಡ್ಸ್ 2006ರಿಂದಲೂ ಬೆಂಗಳೂರಿನಲ್ಲಿ ಹೋಟೆಲ್ ವಹಿವಾಟು ನಡೆಸುತ್ತಿದೆ. ಆದಾಯ ತೆರಿಗೆ ಇಲಾಖೆಯ ಕರ್ನಾಟಕ– ಗೋವಾ ವಲಯದ ಅಧಿಕಾರಿಗಳು ಶೋಧ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ನಸುಕಿನ 5 ಗಂಟೆ ಸುಮಾರಿಗೆ ಆರಂಭವಾದ ಕಾರ್ಯಾಚರಣೆ ರಾತ್ರಿಯವರೆಗೂ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.