ADVERTISEMENT

ಜೈಲಲ್ಲಿ ರಾಜಾತಿಥ್ಯ ಕೇಸ್: ಜೈಲು ಅಧಿಕಾರಿಗಳು ಶಾಮೀಲು ಎಂದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2024, 16:32 IST
Last Updated 11 ನವೆಂಬರ್ 2024, 16:32 IST
<div class="paragraphs"><p>ಹೈಕೋರ್ಟ್‌&nbsp;</p></div>

ಹೈಕೋರ್ಟ್‌ 

   

ಬೆಂಗಳೂರು: ‘ ಜೈಲು ಅಧಿಕಾರಿಗಳ ಸಹಕಾರವಿಲ್ಲದೆ ಕಾನೂನು ಬಾಹಿರ ವಸ್ತುಗಳು ಜೈಲಿನ ಒಳಗೆ ಹೋಗಲು ಸಾಧ್ಯವೇ ಇಲ್ಲ’ ಎಂದು ಹೈಕೋರ್ಟ್‌ ಮೌಖಿಕವಾಗಿ ನುಡಿದಿದೆ.

‘ನನ್ನ ವಿರುದ್ಧದ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಜಾ ಬಂದಿಯಾಗಿರುವ ವಿಲ್ಸನ್‌ ಗಾರ್ಡನ್‌ ನಾಗ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ADVERTISEMENT

‘ಜೈಲಿನ ಅಧಿಕಾರಿಗಳು ಶಾಮೀಲಾಗದಿದ್ದರೆ ಇಂತಹ ಘಟನೆಗಳು ನಡೆಯವುದೇ ಇಲ್ಲ. ಆರೋಪಿಗಳಿಗೆ ಆ ಕುರ್ಚಿಗಳನ್ನು ಸರ್ಕಾರಿ ಅಧಿಕಾರಿಗಳೇ ಕೊಟ್ಟಿದ್ದಾರೆ. ಅದಕ್ಕೆ ಜೈಲಿನ ಅಧಿಕಾರಿಗಳ ಮೇಲೆ ವಿಚಾರಣೆ ನಡೆಸಲಿ. ಅರ್ಜಿದಾರರು ಕಾಫಿ ಕುಡಿಯುವುದು ತಪ್ಪೇ? ಅವರ ವಿರುದ್ಧ ಬಲವಂತದ ಕ್ರಮವನ್ನು ಏಕೆ ತೆಗೆದುಕೊಳ್ಳುತ್ತೀರಿ’ ಎಂದು  ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್‌.ಜಗದೀಶ್‌ ಅವರನ್ನು ಪ್ರಶ್ನಿಸಿದರು.

ಅಂತೆಯೇ, ‘ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸಬಾರದು’ ಎಂದು ತನಿಖಾಧಿಕಾರಿಗಳಿಗೆ ನಿರ್ದೇಶಿಸಿ ವಿಚಾರಣೆಯನ್ನು ಡಿಸೆಂಬರ್ 13ಕ್ಕೆ ಮುಂದೂಡಿದರು.

ಇತ್ತೀಚೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಒಳಾವರಣದಲ್ಲಿ; ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಧೂಮಪಾನ ಮಾಡುತ್ತಿದ್ದ ಸಂದರ್ಭದಲ್ಲಿ ಅವರ ಜೊತೆ ಕುಳಿತಿದ್ದವರಲ್ಲಿ ವಿಲ್ಸನ್‌ ಗಾರ್ಡನ್‌ ನಾಗ ಕೂಡಾ ಇದ್ದರು. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸರು 2024ರ ಆಗಸ್ಟ್‌ 26ರಂದು ಕರ್ನಾಟಕ ಕಾರಾಗೃಹಗಳ ತಿದ್ದುಪಡಿ ಕಾಯ್ದೆ–2022ರ ಅಡಿ ದೂರು ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.