ಬೆಂಗಳೂರು: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಪ್ರಕಟಿಸಿರುವ ದೇಶದ ಎಲ್ಲ ವಿಮಾನ ನಿಲ್ದಾಣಗಳ ವಿವರ ನೀಡುವ ಪುಸ್ತಕದಲ್ಲಿ ಜಕ್ಕೂರು ವಿಮಾನ ನಿಲ್ದಾಣದ ಕುರಿತು ಇರುವ ವಿವರಗಳನ್ನು ಸಲ್ಲಿಸುವಂತೆ ಎಎಐಗೆ ಹೈಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.
ಜಕ್ಕೂರು ವಿಮಾನ ನಿಲ್ದಾಣದ ಪಶ್ಚಿಮ ಭಾಗದಲ್ಲಿ ನಮ್ಮ ಮೆಟ್ರೊ ಎತ್ತರಿಸಿದ ಮಾರ್ಗ ಹಾದು ಹೋಗುವುದನ್ನು ಪ್ರಶ್ನಿಸಿ ವಕೀಲ ಅಜೋಯ್ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ನೇತೃತ್ವದ ವಿಭಾಗೀಯ ಪೀಠ ನಡೆಸಿತು.
ನಾಗರಿಕ ವಿಮಾನಯಾನ ಸಚಿವಾಲಯ 2015ರಲ್ಲಿ ಜಾರಿಗೊಳಿಸಿರುವ ನಿಯಮಗಳಿಗೆ ವಿರುದ್ಧವಾಗಿ ಮೆಟ್ರೊ ರೈಲು ಕಾಮಗಾರಿ ನಡೆಸಲು ಉದ್ದೇಶಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲರು ದೂರಿದರು.
ಕಾಮಗಾರಿಯು ನಿಯಮಗಳ ಉಲ್ಲಂಘನೆ ಆಗುತ್ತದೆಯೇ ಎಂಬುದರ ಕುರಿತು ನಿಲುವು ತಿಳಿಸುವಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಹಾನಿರ್ದೇಶಕರಿಗೆ ನ್ಯಾಯಾಲಯ ಸೂಚಿಸಿತು. ಎರಡು ವಾರಗಳೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ಸೂಚನೆ ನೀಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.