ADVERTISEMENT

‘ಪ್ರಜಾವಾಣಿ’ ಜನಸ್ಪಂದನ ಇಂದು

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2018, 20:06 IST
Last Updated 31 ಆಗಸ್ಟ್ 2018, 20:06 IST
.
.   

ಬೆಂಗಳೂರು: ದಾಸರಹಳ್ಳಿವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್‌ಗಳ ಕುಂದುಕೊರತೆಗಳಿಗೆ ಪರಿಹಾರ ಕಂಡುಕೊಳ್ಳಲು ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳ ಆಶ್ರಯದಲ್ಲಿ ಶನಿವಾರ ‘ಜನಸ್ಪಂದನ’ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಹೆಸರಘಟ್ಟ ಮುಖ್ಯರಸ್ತೆಯ ಸಿದ್ಧೇಶ್ವರ ಬಡಾವಣೆಯ ಎನ್‌.ಎಂ. ಎಚ್‌ ಕನ್ವೆನ್‌ಷನ್‌ ಹಾಲ್‌ನಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ರವರೆಗೆ ಕಾರ್ಯಕ್ರಮ ನಡೆಯಲಿದೆ.

ಈ ಕ್ಷೇತ್ರದ ಶಾಸಕರು, ವಾರ್ಡ್‌ಗಳ ಪಾಲಿಕೆ ಸದಸ್ಯರು, ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ADVERTISEMENT

ಕ್ಷೇತ್ರದ ಕುಂದುಕೊರತೆಗಳ ಬಗ್ಗೆ ಗಮನ ಸೆಳೆದು ಸ್ಥಳದಲ್ಲೇ ಪರಿಹಾರ ಪಡೆಯಲು ಸ್ಥಳೀಯರು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೆ. 1ರಂದು ಬೆಳಿಗ್ಗೆ 9ರಿಂದ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು. ಕುಂದು ಕೊರತೆಗಳನ್ನು janaspandana@printersmysore.co.inಗೆ ಇ–ಮೇಲ್‌ ಕೂಡ ಮಾಡಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.